CinemaCrime

ಶೃತಿ ಹರಿಹರನ್‌ಗೆ ಹಿನ್ನಡೆ; ಮೀ ಟೂ ಕೇಸ್‌ನಲ್ಲಿ ಬಿ ರಿಪೋರ್ಟ್‌ ಸಲ್ಲಿಕೆ

ಬೆಂಗಳೂರು : ಮೀಟೂ ಪ್ರಕರಣದಲ್ಲಿ ನಟಿ ಶೃತಿ ಹರಿಹರನ್‌ಗೆ ಹಿನ್ನಡೆಯಾಗಿದೆ. ಅರ್ಜುನ್‌ ಸರ್ಜಾ ವಿರುದ್ಧ ಶೃತಿ ಹರಿಹರನ್‌ ದೂರು ನೀಡಿದ್ದರು. ಇದರ ವಿಚಾರಣೆ ನಡೆಸಿದ್ದ  ಕಬ್ಬನ್‌ ಪಾರ್ಕ್‌ ಠಾಣೆ ಪೊಲೀಸರು, ಸಾಕ್ಷ್ಯಾಧಾರಗಳ ಕೊರತೆ ಹಿನ್ನೆಲೆಯಲ್ಲಿ ನ್ಯಾಯಾಲಯಕ್ಕೆ ಬಿ ರಿಪೋರ್ಟ್‌ ಸಲ್ಲಿಸಿದ್ದಾರೆ.

 ಮೂರು ವರ್ಷದ ಹಿಂದೆ ನಟಿ ಶ್ರುತಿ ಹರಿಹರನ್ ಅವರು ಹಿರಿಯ ನಟ ಅರ್ಜುನ್ ಸರ್ಜಾ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಹೊರಿಸಿ ದೂರು ನೀಡಿದ್ದರು. ವಿಸ್ಮಯ ಸಿನಿಮಾದ ಚಿತ್ರೀಕರಣ ವೇಳೆ ಅರ್ಜುನ್ ಸರ್ಜಾ ಲೈಂಗಿಕ ಕಿರುಕುಳ ನೀಡಿದ್ದರು ಎಂದು 2018ರಲ್ಲಿ ಶ್ರುತಿ ಹರಿಹರನ್ ಆರೋಪಿಸಿದ್ದರು.

Share Post