CrimeDistricts

ಮೆಡಿಕಲ್‌ ವಿದ್ಯಾರ್ಥಿನಿ ನೀರಿಗೆ ಹಾರಿ ಆತ್ಮಹತ್ಯೆ

ಕೋಲಾರ; ಮೆಡಿಕಲ್‌ನಲ್ಲಿ ಎಂಡಿ ಪಿಡಿಯಾಟ್ರಿಕ್‌ ಓದುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಕೋಲಾರ ಬಳಿಯ ಕೆಂದಟ್ಟಿ ಗ್ರಾಮದ ಸಮೀಪ ಒಂದು ಕ್ವಾರಿ ಇದೆ. ಅಲ್ಲಿ ನೀರಿದ್ದು, ಅದರಲ್ಲಿ ಬಿದ್ದು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯನ್ನು ಬಳ್ಳಾರಿ ಮೂಲದ ದರ್ಶಿನಿ ಎಂದು ಗುರುತಿಸಲಾಗಿದೆ. ಈಕೆ ಹೊಸಕೋಟೆ ಬಳಿ ಇರುವ ಎಂವಿಜೆ ಮೆಡಿಕಲ್‌ ಕಾಲೇಜು ವಿದ್ಯಾರ್ಥಿನಿಯಾಗಿದ್ದಳು. ಆತ್ಮಹತ್ಯೆಗೂ ಮುನ್ನ ದರ್ಶಿನಿ ತನ್ನ ಸ್ನೇಹಿತರಿಗೆಲ್ಲಾ ಕರೆ ಮಾಡಿ ಮಾತನಾಡಿದ್ದಳು ಎಂದು ತಿಳಿದುಬಂದಿದೆ.

ಕ್ವಾರಿಯಲ್ಲಿ ಹುಡುಕಾಟ ನಡೆಸಿದಾಗ ದರ್ಶಿನಿಯ ಮೃತದೇಹ ಪತ್ತೆಯಾಗಿದೆ. ಕೋಲಾರ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆದ್ರೆ ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.

Share Post