BengaluruCrime

ಶಾಸಕ ಮಾಡಾಳ್‌ ವಿರೂಪಾಕ್ಷಪ್ಪಗೆ ಜಾಮೀನು ಮಂಜೂರು

ಬೆಂಗಳೂರು; ಲಂಚ ಸ್ವೀಕಾರ ಪ್ರಕರಣದಲ್ಲಿ ಜೈಲು ಸೇರಿದ್ದ ಶಾಸಕ ಮಾಡಾಳ್‌ ವಿರೂಪಾಕ್ಷಪ್ಪಗೆ ಕೊನೆಗೂ ಜಾಮೀನು ಸಿಕ್ಕಿದೆ. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿದ್ದು, ಹಲವು ಷರತ್ತುಗಳನ್ನು ವಿಧಿಸಿದೆ.

5 ಲಕ್ಷ ರೂಪಾಯಿ ಮೊತ್ತದ ಬಾಂಡ್, ಇಬ್ಬರ ಶ್ಯೂರಿಟಿ ನೀಡುವಂತೆ ಕೋರ್ಟ್‌ ಸೂಚಿಸಿದೆ. 3 ವಾರಕ್ಕೊಮ್ಮೆ ಲೋಕಾಯುಕ್ತ ಪೊಲೀಸರ ಮುಂದೆ ಹಾಜರಾಗಬೇಕು, ತನಿಖಾಧಿಕಾರಿ ವಶಕ್ಕೆ ಪಾಸ್ ಪೋರ್ಟ್ ನೀಡಬೇಕು ಕೋರ್ಟ್‌ ಸೂಚಿಸಿದೆ.

Share Post