CrimeNational

ಟಿಆರ್‌ಎಸ್‌ ಶಾಸಕರ ಖರೀದಿ ಯತ್ನ ಪ್ರಕರಣ; ಬಿ.ಎಲ್‌.ಸಂತೋಷ್‌ಗೆ ಲುಕ್‌ಔಟ್‌ ನೋಟಿಸ್‌

ಹೈದರಾಬಾದ್‌; ನಾಲ್ವರು ಟಿಆರ್‌ಎಸ್‌ ಶಾಸಕರ ಖರೀದಿ ಪ್ರಕರಣ ಸಂಬಂಧ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್‌.ಸಂತೋಷ್‌ ಹಾಗೂ ಮತ್ತಿಬ್ಬರಿಗೆ ವಿಶೇಷ ತನಿಖಾ ತಂಡ ಲುಕ್‌ ಔಟ್‌ ನೋಟಿಸ್‌ ಜಾರಿ ಮಾಡಿದೆ. ಸಂತೋಷ್‌ ಸೇರಿ ಮೂವರಿಗೆ ನಿನ್ನೆ ವಿಚಾರಣೆಗೆ ಹಾಜರಾಗಬೇಕೆಂದು ಎಸ್‌ಐಟಿ ನೋಟಿಸ್‌ ನೀಡಿತ್ತು. ಆದ್ರೆ ಮೂವರೂ ಹಾಜರಾಗಿರಲಿಲ್ಲ. ಹೀಗಾಗಿ ಲುಕ್‌ ಔಟ್‌ ನೋಟಿಸ್‌ ನೀಡಲಾಗಿದೆ.

ಕೆಲ ದಿನಗಳ ಹಿಂದೆ ನಾಲ್ವರು ಟಿಆರ್‌ಎಸ್‌ ಶಾಸಕರ ಖರೀದಿಗೆ ಯತ್ನ ನಡೆದಿತ್ತು. ಈ ಪ್ರಕರಣ ಸಂಬಂಧ ತನಿಖೆ ನಡೆಸಲು ತೆಲಂಗಾಣ ಸರ್ಕಾರ ವಿಶೇಷ ತನಿಖಾ ತಂಡ ರಚನೆ ಮಾಡಿದೆ. ಎಸ್‌ಐಟಿ ಪ್ರಕರಣದಲ್ಲಿ ಭಾಗಿಯಾಗಿದ್ದಾರೆಂಬ ಆರೋಪದ ಮೇಲೆ ಬಿ.ಎಲ್‌.ಸಂತೋಷ್‌, ತುಷಾರ್‌ ಹಾಗೂ ಜಗ್ಗುಸ್ವಾಮಿಗೆ ವಿಚಾರಣೆಗೆ ಹಾಜರಾಗಲು ಸೂಚಿಸಿತ್ತು. ಆದ್ರೆ ನಿನ್ನೆ ವಿಚಾರಣೆಗೆ ಹಾಜರಾಗಿರಲಿಲ್ಲ. ಹೀಗಾಗಿ ಲುಕ್‌ ಔಟ್‌ ನೋಟಿಸ್‌ ಜಾರಿಗೊಳಿಸಲಾಗಿದೆ.

Share Post