2 ಕೋಟಿ ರೂ. ನೀಡುವಂತೆ ಬೆದರಿಕೆ; ಬೆಂಗಳೂರಿನ ವ್ಯಕ್ತಿ ಅರೆಸ್ಟ್..!
ಮುಂಬೈ; ರಿಯಲ್ ಎಸ್ಟೇಟ್ ಉದ್ಯಮಿಗೆ 2 ಕೋಟಿ ರೂಪಾಯಿ ನೀಡುವಂತೆ ಬೆದರಿಕೆ ಹಾಕುತ್ತಿದ್ದ ಬೆಂಗಳೂರು ಮೂಲದ ವ್ಯಕ್ತಿಯೊಬ್ಬನನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.
ಭೂಗತ ಪಾತಕಿ ರವಿ ಪೂಜಾರಿ ಈಗ ಜೈಲು ಸೇರಿದ್ದಾನೆ. ಆತನ ಸಹಚರ ಎಂದು ಪರಿಚಯಿಸಿಕೊಂಡ ವ್ಯಕ್ತಿ, ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರಿಗೆ ಕರೆ ಮಾಡಿದ್ದಾನೆ. ಎರಡು ಕೋಟಿ ರೂಪಾಯಿ ಕೊಡಬೇಕು. ಇಲ್ಲದಿದ್ದರೆ ಕೊಲೆ ಮಾಡುತ್ತೇವೆ ಎಂದು ಬೆದರಿಕೆ ಹಾಕಿದ್ದಾನೆ.
ಪದೇ ಪದೇ ಕರೆ ಮಾಡುತ್ತಿದ್ದರಿಂದ ಉದ್ಯಮಿ ಪೊಲೀಸರಿಗೆ ದೂರು ನೀಡಿದ್ದರು. ದೂರು ಆಧರಿಸಿ ಕಾರ್ಯಾಚರಣೆಗಿಳಿದ ಮುಂಬೈ ಸೈಬರ್ ಸೆಲ್ ಪೊಲೀಸರು, ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.