ಹಳೇ ಹುಬ್ಬಳ್ಳಿಯಲ್ಲಿ ಚಾಕು ಇರಿತ; ವ್ಯಕ್ತಿಗೆ ಗಂಭೀರ ಗಾಯ
ಹುಬ್ಬಳ್ಳಿ : ಹಾಡಹಗಲೇ ವ್ಯಕ್ತಿಯೊಬ್ಬನಿಗೆ ಚಾಕುವಿನಿಂದ ಇರಿದು ಕೊಲೆ ಮಾಡಲು ಯತ್ನಿಸಿರುವ ಘಟನೆ ಹಳೇಹುಬ್ಬಳ್ಳಿಯ ಹೆಗ್ಗೇರಿಯಲ್ಲಿ ನಡೆದಿದೆ.ಹೆಗ್ಗೇರಿಯ ಆಸಿಫ್ ಎಂಬಾತನೇ ಚಾಕುವಿನಿಂದ ಇರಿತಕ್ಕೊಳಗಾದ ವ್ಯಕ್ತಿ. ಈತನನ್ನು ಸದ್ಯ ಕಿಮ್ಸ್ ಆಸ್ಪತ್ರೆಗೆ ಸೇರಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾನೆ.
ಹಾಡಹಗಲೇ ಅಪರಿಚಿತ ವ್ಯಕ್ತಿಗಳು ಆಸಿಫ್ ಮೇಲೆ ದಾಳಿ ಮಾಡಿದ್ದಾರೆ ಎನ್ನಲಾಗಿದೆ. ಕೃತ್ಯಕ್ಕೆ ಕಾರಣ ಏನೆಂದು ಇನ್ನೂ ಗೊತ್ತಾಗಿಲ್ಲ. ಆರೋಪಿಗಳ ಬಗ್ಗೆಯೂ ಇನ್ನೂ ಮಾಹಿತಿ ಇಲ್ಲ. ಹಳೇ ವೈಷಮ್ಯದ ಹಿನ್ನೆಲೆಯಲ್ಲಿ ಈ ದಾಳಿ ನಡೆದಿರುವಬಹುದು ಎಂದು ಹೇಳಲಾಗಿದೆ. ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.