ಮಗು ಮಾಡಿಕೊಳ್ಳುವ ವಿಚಾರವಾಗಿ ಜಗಳ; ಪತ್ನಿ ಹತ್ಯೆ
ಬೆಂಗಳೂರು; ಮಗು ಮಾಡಿಕೊಳ್ಳುವ ವಿಚಾರವಾಗಿ ನಡೆದ ಗಂಡ – ಹೆಂಡತಿ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ.. ಪತ್ನಿಗೆ ಮಗು ಮಾಡಿಕೊಳ್ಳಬೇಕೆಂಬ ಆಸೆ. ಆದ್ರೆ ಪತಿ ಈಗಲೇ ಬೇಡ ಎನ್ನುತ್ತಿದ್ದ. ಇದೇ ಕಾರಣಕ್ಕೆ ಪತಿ ತನ್ನ ಪತ್ನಿಯನ್ನು ತಲೆದಿಂಬಿನಿಂದ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ. ಬೆಂಗಳೂರಿನ ಹೆಚ್ ಎಎಲ್ ಪೊಲೀಸ್ ಠಾಣಾ ವ್ಯಾಪ್ತಿಯ ಅನ್ನಸಂದ್ರದಲ್ಲಿ ಈ ಘಟನೆ ನಡೆದಿದೆ.
ಗಿರಿಜಾಳ ಎಂಬ ಮಹಿಳೆಯೇ ಕೊಲೆಯಾದವಳಾಗಿದ್ದು, ಪತಿ ನವೀನ್ ಎಂಬಾತ ಈ ಕೃತ್ಯ ಎಸಗಿದ್ದಾನೆ. ಭಟ್ಕಳ ಮೂಲದ 30 ವರ್ಷದ ಗಿರಿಜಾ ಗಾರ್ಮೆಂಟ್ಸ್ ನಲ್ಲಿ ಕೆಲಸ ಮಾಡುತ್ತಿದ್ದಳು. ನವೀನ್ ಉಪ್ಪಿನಕಾಯಿ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ.. ಇಬ್ಬರೂ ಪ್ರೀತಿಸುತ್ತಿದ್ದರು. ಎಂಟು ತಿಂಗಳ ಹಿಂದೆ ಮದುವೆಯಾಗಿದ್ದರು.
ಗಿರಿಜಾಗೆ ಒಮ್ಮೆ ಗರ್ಭಪಾತವಾಗಿತ್ತು. ಅನಂತರ ಇಬ್ಬರ ನಡುವೆ ಗಲಾಟೆ, ವಾಗ್ವಾದಗಳು ನಡೆಯುತ್ತಿದ್ದವು ಎಂದು ತಿಳಿದುಬಂದಿದೆ. ಸದ್ಯ ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.