ಮೈಸೂರಿನ ವೈದ್ಯೆ ಖಿನ್ನತೆಯಿಂದ ನೇಣಿಗೆ ಶರಣು
ಮೈಸೂರು; ಅತ್ಯುತ್ತಮ ವೈದ್ಯಕೀಯ ಸೇವೆ ನೀಡಿ ಮನೆ ಮಾತಾಗಿದ್ದ ವೈದ್ಯೆಯೊಬ್ಬರು ನೇಣಿಗೆ ಶರಣಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಡಾ.ಭಗೀರತಿ ಆತ್ಮಹತ್ಯೆ ಮಾಡಿಕೊಂಡ ವೈದ್ಯೆ. ಖಿನ್ನತೆಯಿಂದ ಬಳಲುತ್ತಿದ್ದ ಅವರು ಶ್ರೀರಾಮಪುರ ಬಡಾವಣೆಯ ಮನೆಯಲ್ಲಿ ನೇನು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿಕೊಂಡಿದ್ದಾರೆ.
ಹೆಚ್.ಡಿ ಕೋಟೆಯ ವಿವೇಕಾ ಪಾಲಿ ಕ್ಲಿನಿಕ್ ನಲ್ಲಿ ಡಾ.ಬಾಗಿರಥಿ ಕರ್ತವ್ಯ ನಿರ್ವಹಿಸುತ್ತಿದ್ದರು. ಆರು ವರ್ಷಗಳ ಹಿಂದೆ ವೈದ್ಯೆ ಭಗೀರತಿ ತನ್ನ ಪತಿಯನ್ನು ಕಳೆದುಕೊಂಡಿದ್ದರು. ಇದರಿಂದ ನೊಂದಿದ್ದ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.