CrimeNational

ನ್ಯಾಷನಲ್‌ ಹೆರಾಲ್ಡ್‌ ಕೇಸ್‌; ವಿಚಾರಣೆಗೆ ಹಾಜರಾದ ರಾಹುಲ್‌ ಗಾಂಧಿ

ಬೆಂಗಳೂರು: ನ್ಯಾಷನಲ್‌ ಹೆರಾಲ್ಡ್‌ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಜಾರಿ ನಿರ್ದೇಶನಾಲಯದ ಅಧಿಕಾರಿಗಳ ಮುಂದೆ ಹಾಜರಾಗಿದ್ದಾರೆ. ಇಂದು ಬೆಳಗ್ಗೆ ಅವರ ನಿವಾಸದಿಂದ ತಮ್ಮ ಸಹೋದರಿಗೆ ಪ್ರಿಯಾಂಕಾ ವಾದ್ರಾ ಜೊತೆಯಲ್ಲಿ ಅವರು ಇಡಿ ಕಚೇರಿಗೆ ತೆರಳಿದರು.

 

ಅಕ್ರಮ ಹಣ ವರ್ಗಾವಣೆ ಮಾಡಲಾಗಿದೆ ಎಂದು ಆರೋಪಿಸಿ ಬಿಜೆಪಿ ನಾಯಕ ಸುಬ್ರಮಣಿಯನ್‌ ಸ್ವಾಮಿ ದೂರು ದಾಖಲಿಸಿದ್ದರು. ಪ್ರಕರಣದ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಜೂನ್‌ 2 ರಂದು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್‌ ಜಾರಿ ಮಾಡಿದ್ದರು. ಆದ್ರೆ ಅಂದು ರಾಹುಲ್‌ ಗಾಂಧಿ ವಿದೇಶದಲ್ಲಿದ್ದದ್ದರಿಂದ ಬೇರೆ ದಿನಾಂಕ ನೀಡುವಂತೆ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯ ಜೂನ್‌ 13ರಂದು ವಿಚಾರಣೆಗೆ ಬರುವಂತೆ ಸೂಚಿಸಿತ್ತು. ಈ ಹಿನ್ನೆಲೆಯಲ್ಲಿ ರಾಹುಲ್‌ ಗಾಂಧಿ ಇಂದು ವಿಚಾರಣೆಗೆ ಹಾಜರಾಗಿದ್ದಾರೆ.

 

ಇನ್ನು ಸೋನಿಗಾಂಧಿಯವರಿಗೂ ಸಮನ್ಸ್‌ ನೀಡಲಾಗಿತ್ತು. ಆದ್ರೆ ಅನಾರೋಗ್ಯದ ಹಿನ್ನೆಲೆಯಲ್ಲಿ ಅವರು ವಿಚಾರಣೆಗೆ ಹಾಜರಾಗುತ್ತಿಲ್ಲ.

Share Post