ಒಡಿಶಾ ಭೀಕರ ರೈಲು ದುರಂತ ಪ್ರಕರಣ; ಸಿಬಿಐ ತನಿಖೆ
ನವದೆಹಲಿ; ಒಡಿಶಾದಲ್ಲಿ ನಡೆದ ಮೂರು ರೈಲುಗಳ ಭೀಕರ ಸರಣಿ ಅಪಘಾತದಲ್ಲಿ ಸುಮಾರು 300 ಮಂದಿ ಸಾವನ್ನಪ್ಪಿದ್ದಾರೆ. ಸಾವಿರಕ್ಕೂ ಹೆಚ್ಚು ಮಂದಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ದುರಂತಕ್ಕೆ ಕಾರಣ ಎಂಬುದರ ಬಗ್ಗೆ ತನಿಖೆ ತೀವ್ರಗೊಂಡಿದೆ. ಈ ನಡುವೆ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಲು ಚಿಂತನೆ ನಡೆಯುತ್ತಿದೆ. ಘಟನೆಯ ತನಿಖೆಯನ್ನು ಸಿಬಿಐಗೆ ವಹಿಸುವಂತೆ ರೈಲ್ವೆ ಮಂಡಳಿ ಶಿಫಾರಸು ಮಾಡಿದೆ ಅಂತ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ.
ಈ ಹಿನ್ನೆಲೆಯಲ್ಲಿ ಘಟನೆಯನ್ನು ಸಿಬಿಐಗೆ ವಹಿಸು ನಿರ್ಧರಿಸಲಾಗಿದೆ ಎಂದು ರೈಲ್ವೆ ಸಚಿವರು ಹೇಳಿದ್ದಾರೆ. ಕೋಲ್ಕತಾದಿಂದ ಚೆನ್ನೈಗೆ ಬರುತ್ತಿದ್ದ ಕೋರಮಂಡಲ್ ಎಕ್ಸ್ಪ್ರೆಸ್ ರೈಲು ತಪ್ಪಾದ ಸಿಗ್ನಲ್ ಕಾರಣದಿಂದ ಟ್ರ್ಯಾಕ್ ಬದಲಿಸಿತ್ತು. ಈ ಕಾರಣಕ್ಕೆ ಅಪಘಾತ ನಡೆದಿದೆ.