CrimeNational

ಮೂರು ಅಂತಸ್ತಿನ ಕಟ್ಟಡದಲ್ಲಿ ಬೆಂಕಿ, ಮೂಕ ಪ್ರಾಣಿಗಳ ರಕ್ಷಣೆ

ಮಹಾರಾಷ್ಟ್ರ: ಮೂರು ಅಂತಸ್ತಿನ ಕಟ್ಟಡದಲ್ಲಿ ಅಗ್ನಿ ದುರಂತ ಉಂಟಾದ ಘಟನೆ ಪುಣೆಯಲ್ಲಿ ನಡೆದಿದೆ. ಅಗ್ನಿ ಅವಘಡದಲ್ಲಿ ಸದ್ಯಕ್ಕೆ ಯಾವುದೇ ಪ್ರಾಣಾಪಾಯ ಉಂಟಾಗಿಲ್ಲ. ಬೆಂಕಿ ದುರಂತದ ವಿಚಾರ ತಿಳಿಯುತ್ತಿದ್ದಂತೆ ಕೂಡಲೇ ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು. ಕಾರ್ಐಾಚರಣೆ ವೇಳೆ ಕಟ್ಟಡದಲ್ಲಿ ಸಿಲುಕಿದ್ದ ಮೂರು ಪರ್ಷಿಯನ್‌ ಬೆಕ್ಕುಗಳನ್ನು ರಕ್ಷಣೆ  ಮಾಡಲಾಗಿದೆ ಎಂದು ಅಗ್ನಿಶಾಮಕ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಕಟ್ಟಡದಲ್ಲಿ ಬೆಂಕಿಯಿಂದ ಉಂಟಾದ ದಟ್ಟ ಹೊಗೆ ತುಂಬಿದ್ದ ಫ್ಲಾಟ್‌ನಲ್ಲಿ ಸಾಕುಪ್ರಾಣಿಗಳು ಸಿಲುಕಿಕೊಂಡಿದ್ದವು.  ಅವುಗಳನ್ನು ರಕ್ಷಿಸುವಲ್ಲಿ ನಾವು ಯಶಸ್ವಿಯಾಗಿದ್ದೇವೆ ಎಂದು ಅಗ್ನಿಶಾಮಕ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಯಾವುದೇ ಸಾವು-ನೋವು ಉಂಟಾಗಿಲ್ಲ ಎಂದು ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಜನ ಆಚೆ ಬಂದಿದ್ದಾರೆ.

Share Post