ತಮಕೂರು ಅಪಘಾತ ಪ್ರಕರಣ; ತಲಾ 2 ಲಕ್ಷ ಪರಿಹಾರ ಘೋಷಿಸಿದ ಮೋದಿ
ತುಮಕೂರು; ಬಾಲೆನಹಳ್ಳಿ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟವರಿಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಮೃತರ ಕುಟುಂಬಗಳಿಗೆ ತಲಾ ಎರಡು ಲಕ್ಷ ರೂಪಾಯಿ ಹಾಗೂ ಗಾಯಾಳುಗಳಿಗೆ ತಲಾ 50 ಸಾವಿರ ರೂಪಾಯಿ ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ಕರ್ನಾಟಕದ ತುಮಕೂರು ಜಿಲ್ಲೆಯಲ್ಲಿ ನಡೆದ ಅಪಘಾತ ಹೃದಯ ವಿದ್ರಾವಕ. ಅಪಘಾತದಲ್ಲಿ ಜೀವ ಕಳೆದುಕೊಂಡವರಿಗೆ ಸಂತಾಪ ಸೂಚಿಸುತ್ತೇನೆ. ಗಾಯಾಳುಗಳು ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸುತ್ತೇನೆ. ಮೃತರ ಕುಟುಂಬದವರಿಗೆ ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ ಎರಡು ಲಕ್ಷ ರೂಪಾಯಿ ಹಾಗೂ ಗಾಯಗೊಂಡವರಿಗೆ ತಲಾ 50 ಸಾವಿರ ರೂಪಾಯಿ ಪರಿಹಾರ ನೀಡಲಾಗುವುದು ಎಂದಿದ್ದಾರೆ.
ಇಂದು ಮುಂಜಾನೆ ನಡೆದ ಅಪಘಾಯದಲ್ಲಿ ಒಂಬತ್ತು ಕೂಲಿ ಕಾರ್ಮಿಕರು ಸಾವನ್ನಪ್ಪಿದ್ದರು.