CrimeDistricts

ಅತ್ಯಾಚಾರ ಆರೋಪಿಗೆ 43 ವರ್ಷ ಕಠಿಣ ಕಾರಾಗೃಹ ಶಿಕ್ಷೆ

ಮೈಸೂರು; ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ಆರೋಪಿಗೆ ಮೈಸೂರಿನ ಪೋಕ್ಸೊ ಸ್ಪೆಷಲ್‌ ಕೋರ್ಟ್‌ 43 ವರ್ಷಗಳ ಕಠಿಣ ಶಿಕ್ಷೆ ವಿಧಿಸಿದೆ. ಜೊತೆಗೆ 50 ಸಾವಿರ ರೂಪಾಯಿ ದಂಡ ಹಾಗೂ ಸಂತ್ರಸ್ತ ಬಾಲಕಿಗೆ ಏಳು ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಕೋರ್ಟ್‌ ಸೂಚಿಸಿದೆ.

ಅಪರಾಧಿ ಬಿಹಾರ ಮೂಲದವ ಎಂದು ತಿಳಿದುಬಂದಿದ್ದು, ವಿಶೇಷ ಕೋರ್ಟ್​ನ ನ್ಯಾಯಾಧೀಶೆ ಶೈಮಾ ಕಮರೋಜ್ ಈ ಆದೇಶ ಪ್ರಕಟಿಸಿದ್ದಾರೆ. 2021ರಲ್ಲಿ ಮೈಸೂರಿನಲ್ಲಿ ಈ ಕೃತ್ಯ ಎಸಗಲಾಗಿತ್ತು. 10 ವರ್ಷದ ಬಾಲಕಿ ಮೇಲೆ ಶಿಕ್ಷೆಗೊಳಗಾಗಿರುವ ಅಪರಾಧಿ ನಿರಂತರವಾಗಿ ಅತ್ಯಾಚಾರ ಎಸಗಿದ್ದ. ಮೈಸೂರು ಗ್ರಾಮಾಂತರ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

Share Post