CrimeNational

ಪೋಕ್ಸೋ ಕೋರ್ಟ್‌ ನ್ಯಾಯಾಧೀಶ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ..!

ಭುವನೇಶ್ವರ; ಲೈಂಗಿಕ ಅಪರಾಧಗಳಿಂದ ಮಕ್ಕಳ ವಿಶೇಷ ರಕ್ಷಣಾ ಕಾಯ್ದೆ(ಪೋಕ್ಸೊ) ನ್ಯಾಯಾಲಯದ ನ್ಯಾಯಾಧೀಶ ಸುಭಾಶ್ ಕುಮಾರ್ ಬಿಹಾರಿ ಅವರು ಒಡಿಶಾದ ಕಟಕ್ ನಗರದ ತಮ್ಮ ನಿವಾಸದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಸುಭಾಷ್ ಕುಮಾರ್ ಬಿಹಾರಿ ಅವರು ತಮ್ಮ ಅಧಿಕೃತ ನಿವಾಸದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮೇಲ್ನೋಟಕ್ಕೆ ಆತ್ಮಹತ್ಯೆಯಂತೆ ತೋರುತ್ತದೆ. ಈ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಕಟಕ್‌ನ ಸಹಾಯಕ ಪೊಲೀಸ್ ಕಮಿಷನರ್ ತಪಸ್ ಚಂದ್ರ ಪ್ರಧಾನ್ ತಿಳಿಸಿದ್ದಾರೆ.

ಘಟನೆ ನಡೆದಾಗ ನ್ಯಾಯಾಧೀಶರ ಪತ್ನಿ ಮನೆಯಲ್ಲಿರಲಿಲ್ಲ. ಮಕ್ಕಳು ಶಾಲೆಗೆ ಹೋಗಿದ್ದರು. ಕಳೆದೆರಡು ದಿನಗಳಿಂದ ರಜೆಯಲ್ಲಿದ್ದ ನ್ಯಾಯಾಧೀಶರು ಶುಕ್ರವಾರ ಕೆಲಸಕ್ಕೆ ಹಾಜರಾಗಬೇಕಿತ್ತು ಎಂದು ಅವರು ಮಾಹಿತಿ ನೀಡಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಟಕ್‌ನ ಎಸ್‌‍ಸಿಬಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ಪೋಕ್ಸೊ ನ್ಯಾಯಾಲಯದ ನ್ಯಾಯಾಧೀಶರ ಸಾವಿಗೆ ಕಾರಣ ತಿಳಿದು ಬಂದಿಲ್ಲ. ಈ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದು, ಪ್ರಾಥಮಿಕವಾಗಿ ಆತ್ಮಹತ್ಯೆ ಆಗಿರಬಹುದು ಎಂದು ಶಂಕಿಸಲಾಗಿದೆ.

Share Post