Crime

ಭಾರಿ ಪ್ರಮಾಣದ ಶಸ್ತ್ರಾಸ್ತ್ರ ತಯಾರಿಕೆ; ಸಿಕ್ಕಿಬಿದ್ದ ಆರೋಪಿ

ಲಖನೌ: ಉತ್ತರ ಪ್ರದೇಶದ ಮಥುರಾದ ದೌಲತ್‌ಪೇಟೆ ಪ್ರದೇಶದಲ್ಲಿ ಅಕ್ರಮ ಬಂದೂಕು ತಯಾರಿಕಾ ಘಟಕವನ್ನು ಪೊಲೀಸರು ಪತ್ತೆ ಹೆಚ್ಚಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿರುವ ಪೊಲೀಸರು, ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿದ್ದಾರೆ.

ದಾಳಿ ವೇಳೆ ಒಬ್ಬ ವ್ಯಕ್ತಿಯನ್ನು ಬಂಧಿಸಲಾಗಿದೆ. ಬಂಧಿತನಿಂದ ಒಟ್ಟು 8 ಪಿಸ್ತೂಲ್‌, 4 ಗನ್‌ಗಳು, 13 ಸಜೀವ ಗುಂಡುಗಳು ಹಾಗೂ ಶಸ್ತ್ರಾಸ್ತ್ರ ತಯಾರಿಕಾ ಉಪಕರಣಗಳನ್ನು ವಶಪಡಿಸಿಕೊಳ್ಳಲಾಗಿದೆ.

ಕೆಲ ದಿನಗಳ ಹಿಂದೆ ಗಾಜಾಯಿಬಾದ್‌ನಲ್ಲಿ ಇಂತಹದ್ದೇ ಒಂದು ಘಟಕದ ಮೇಲೆ ದಾಳಿ ನಡೆಸಲಾಗಿತ್ತು. ಆ ದಿನವೂ ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶಪಡಿಸಿಕೊಳ್ಳಲಾಗಿತ್ತು. ಉತ್ತರ ಪ್ರದೇಶದಲ್ಲಿ ಚುನಾವಣೆ ನಡೆಯುತ್ತಿದ್ದು, ಇಂತಹ ಸಂದರ್ಭದಲ್ಲಿ ಶಸ್ತ್ರಾಸ್ತ್ರ ಪತ್ತೆಯಾಗಿದೆ. ಚುನಾವಣೆಯಲ್ಲಿ ಬಳಸಲೆಂದೇ ಈ ಶಸ್ತ್ರಾಸ್ತ್ರ ತಯಾರಿಸುತ್ತಿದ್ದರು ಎಂದು ಹೇಳಲಾಗುತ್ತಿದೆ.

Share Post