Crime

ಹೈದರಾಬಾದ್‌ ಅತ್ಯಾಚಾರ ಪ್ರಕರಣ; ಮೂವರ ಅರೆಸ್ಟ್

ಹೈದರಾಬಾದ್; ಬೆಂಜ್‌ ಕಾರಿನಲ್ಲಿ ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಜ್ಯೂಬಿಲಿ ಹಿಲ್ಸ್‌ ಪೊಲೀಸರು ತಿಳಿಸಿದ್ದಾರೆ.

ಹೈದರಾಬಾದ್‌ನ ಜುಬಿಲಿ– ಬಂಜಾರಾ ಹಿಲ್ಸ್ ಪ್ರದೇಶದಲ್ಲಿ ಕಳೆದ ಶನಿವಾರ ಮರ್ಸಿಡಿಸ್ ಬೆಂಜ್ ಕಾರಿನಲ್ಲಿ 17 ವರ್ಷದ ಬಾಲಕಿ ಮೇಲೆ ಐವರು ಬಾಲಕರ ಗುಂಪೊಂದು ಸಾಮೂಹಿಕ ಅತ್ಯಾಚಾರ ಎಸಗಿತ್ತು.

ಪ್ರಕರಣ ಸಂಬಂಧ ಇದುವರೆಗೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮತ್ತಿಬ್ಬರು ಆರೋಪಿಗಾಗಿ ನೆರೆ ರಾಜ್ಯಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ. ಮುಂದಿನ 48 ಗಂಟೆಗಳಲ್ಲಿ ಎಲ್ಲಾ ಆರೋಪಿಗಳನ್ನು ಬಂಧಿಸುತ್ತೇವೆ ಎಂದು ಹೈದರಾಬಾದ್‌ ಡಿಸಿಪಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Share Post