BengaluruCrime

ಪ್ರವೀಣ್‌ ಹತ್ಯೆ ಪ್ರಕರಣ; ಎನ್‌ಐಎಗೆ ಹಸ್ತಾಂತರಿಸಲು ಸರ್ಕಾರ ನಿರ್ಧಾರ

ಬೆಂಗಳೂರು; ಹಿಂದೂ ಪರ ಸಂಘಟನೆ ಮುಖಂಡ ಪ್ರವೀಣ್‌ ಹತ್ಯೆ ಪ್ರಕರಣವನ್ನು ಎನ್‌ಐಎ ವಹಿಸಲು ರಾಜ್ಯ ಸರ್ಕಾರ ತೀರ್ಮಾನ ಮಾಡಿದೆ. ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲು ಗೃಹ ಇಲಾಖೆಗೆ ಸಿಎಂ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದ್ದಾರೆ.

ಪ್ರವೀಣ್‌ ಹತ್ಯೆ ಪ್ರಕರಣಕ್ಕೆ ಅಂತಾರಾಜ್ಯ ನಂಟು ಇದೆ. ಕೊಲೆಗಾರರು ಕೇರಳದಿಂದ ಬಂದಿದ್ದರು ಎಂದು ಹೇಳಲಾಗುತ್ತಿದೆ. ಜೊತೆಗೆ ಮೃತನ ಮನೆಯವರು ಕೂಡಾ ಪ್ರಕರಣವನ್ನು ಎನ್‌ಐಎಗೆ ವಹಿಸುವಂತೆ ಕೋರಿದ್ದರು. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಈ ತೀರ್ಮಾನ ಕೈಗೊಂಡಿದೆ.

Share Post