CrimeDistricts

ಬೆಳಗಾವಿ ಜೈಲು ಆವರಣದಲ್ಲಿ ಪಾಕ್‌ ಪರ ಘೋಷಣೆ; ಆರೋಪಿಗೆ ಧರ್ಮದೇಟು!

ಬೆಳಗಾವಿ; ಕೇಂದ್ರ ಸಚಿವ ನಿತಿನ್‌ ಗಡ್ಕರಿ ಅವರಿಗೆ ಜೀವ ಬೆದರಿಕೆ ಆರೋಪ ಪ್ರಕರಣ ಸಂಬಂಧ ಬೆಳಗಾವಿ ಜೈಲಿಗೆ ವಿಚಾರಣೆಗೆ ಹಾಜರಾಗಿದ್ದ ಆರೋಪಿಯೊಬ್ಬ ಪಾಕ್‌ ಪರ ಘೋಷಣೆ ಕೂಗಿದ್ದಾನೆ.. ಕೋರ್ಟ್‌ ಆವರಣದಲ್ಲೇ ಈ ಘಟನೆ ನಡೆದಿದ್ದು, ಈ ವೇಳೆ ವಕೀಲರು ಹಾಗೂ ಸಾರ್ವಜನಿಕರು ಆರೋಪಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ.. ಅನಂತರ ಪೊಲೀಸರು ಆರೋಪಿಗಳನ್ನು ಬಿಡಿಸಿದ್ದಾರೆ..

ಕೊಲೆ ಪ್ರಕರಣವೊಂದರಲ್ಲಿ ಜೈಲು ಸೇರಿರುವ ನಟೋರಿಯಸ್ ಪಾತಕಿ ಜಯೇಶ್ ಪೂಜಾರಿ ಎಂಬಾತ ಜನವರಿ 14 ಮತ್ತು ಮಾರ್ಚ್ 21 ರಂದು ಹಿಂಡಲಗಾ ಜೈಲಿನಿಂದ ಸೆಲ್ ಫೋನ್ ಬಳಸಿ ಗಡ್ಕರಿ ಅವರಿಗೆ ಬೆದರಿಕೆ ಕರೆಗಳನ್ನು ಮಾಡಿದ್ದ.. ಈ ಪ್ರಕರಣದ ಸಂಬಂಧ ಇಂದು ಆತನನ್ನು ವಿಚಾರಣೆಗೆಂದು ಕೋರ್ಟ್‌ಗೆ ಕರೆದುಕೊಂಡು ಬರಲಾಗಿತ್ತು. ಈ ವೇಳೆ ಪಾತಕಿ ಜಯೇಶ್‌ ಪೂಜಾರಿ ಪಾಕ್‌ ಪರ ಘೋಷಣೆಗಳನ್ನು ಕೂಗಿದ್ದಾನೆ.. ಇದರಿಂದಾಗಿ ವಕೀಲರು ಹಾಗೂ ಸಾರ್ವಜನಿಕರು ಧರ್ಮದೇಟು ಕೊಟ್ಟಿದ್ದಾರೆ..

ಕೂಡಲೇ ಪೊಲೀಸರು ಆರೋಪಿಯನ್ನು ರಕ್ಷಣೆ ಮಾಡಿ ಎಪಿಎಂಸಿ ಠಾಣೆಗೆ ಕರೆದುಕೊಂಡು ಬಂದಿದ್ದಾರೆ.. ಈತ ನಿತಿನ್‌ ಗಡ್ಕರಿಗೆ ಜೀವ ಬೆದರಿಕೆ ಹಾಕಿದ್ದಲ್ಲದೆ, ಐಪಿಎಸ್​ ಅಧಿಕಾರಿ ಅಲೋಕ್​ ಕುಮಾರ್​ ಅವರಿಗೂ ಬೆದರಿಕೆ ಹಾಕಿದ್ದ.. ಹಿಂಡಲಗಾ ಜೈಲಿನಲ್ಲಿದ್ದುಕೊಂಡೇ ಮೊಬೈಲ್‌ ಬಳಸಿ ಇಬ್ಬರಿಗೂ ಕರೆ ಮಾಡಿ ಬೆದರಿಕೆ ಹಾಕಿದ್ದ ಎಂದು ತಿಳಿದುಬಂದಿದೆ.. ಈತನಿಗೆ ಭಯೋತ್ಪಾದಕ ಅಫ್ಸರ್ ಪಾಷಾ ನಂಟಿರುವುದು ಪತ್ತೆಯಾಗಿತ್ತು.

Share Post