ಇಂದು ಪ್ರಾಸಿಕ್ಯೂಷನ್ ಪ್ರಕರಣದ ತೀರ್ಪು; ಪಾರಾಗ್ತಾರಾ ಸಿಎಂ ಸಿದ್ದರಾಮಯ್ಯ..?
ಬೆಂಗಳೂರು; ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ನೀಡಿರುವ ಪ್ರಾಸಿಕ್ಯೂಷನ್ ಅನುಮತಿ ರದ್ದು ಮಾಡುವಂತೆ ಕೋರಿ ಸಿಎಂ ಸಲ್ಲಿಸಿದ್ದ ಅರ್ಜಿಯ ತೀರ್ಪು ಇಂದು ಪ್ರಕಟವಾಗಲಿದೆ.. ಆರು ದಿನಗಳ ಕಾಲ ಪ್ರಕರಣದ ವಾದ ಮಂಡನೆ ಆಲಿಸಿದ್ದ ಹೈಕೋರ್ಟ್ ತೀರ್ಪನ್ನು ಕಾಯ್ದಿರಿಸಿತ್ತು.. ಇಂದು ಪ್ರಕರಣದ ತೀರ್ಪು ಪ್ರಕಟವಾಗಲಿದ್ದು, ಸಿಎಂ ಮನವಿಯನ್ನು ಕೋರ್ಟ್ ಪುರಸ್ಕರಿಸಿದರೆ ಸಿದ್ದರಾಮಯ್ಯಗೆ ರಿಲೀಫ್ ಸಿಗಲಿದೆ.. ಇಲ್ಲದಿದ್ದರೆ, ಸಿದ್ದರಾಮಯ್ಯ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ಪ್ರಸಂಗ ಕೂಡಾ ಎದುರಾಗಬಹುದು.. ಇಲ್ಲಿದಿದ್ದರೆ ಸುಪ್ರೀಂ ಕೋರ್ಟ್ ಮೆಟ್ಟಿಲೇರುವ ಸಾದ್ಯತೆ ಇದೆ..
ಟಿ.ಜೆ.ಅಬ್ರಹಾಂ, ಪ್ರದೀಪ್ ಹಾಗೂ ಸ್ನೇಹಮಯಿ ಕೃಷ್ಣ ಅವರು ರಾಜ್ಯಪಾಲರಿಗೆ ಮನವಿ ಸಲ್ಲಿಸಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವಂತೆ ಮನವಿ ಮಾಡಿದ್ದರು.. ಅವರ ಮನವಿ ಪುರಸ್ಕರಿಸಿದ ರಾಜ್ಯಪಾಲರು ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದರು.. ಆದ್ರೆ ಪ್ರಕರಣದಲ್ಲಿ ನನ್ನ ಯಾವುದೇ ಪಾತ್ರ ಇಲ್ಲ.. ಆದರೂ ನನ್ನ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಲಾಗಿದೆ.. ಇದು ರಾಜಕೀಯಪ್ರೇರಿತ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದರು.. ರಾಜ್ಯಪಾಲರ ಪ್ರಾಸಕ್ಯೂಷನ್ ಆದೇಶಕ್ಕೆ ತಡೆ ನೀಡಬೇಕೆಂದು ಸಿಎಂ ಸಿದ್ದರಾಮಯ್ಯ ಹೈಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಕೆ ಮಾಡಿದ್ದರು..
ಇಂದು ಮಧ್ಯಾಹ್ನ 12 ಗಂಟೆ ಹೈಕೋರ್ಟ್‌ನಲ್ಲಿ ಈ ಕೇಸ್‌ನ ತೀರ್ಪು ಬರಲಿದೆ.. ಒಂದು ವೇಳೆ ಸಿಎಂ ಪರವಾದ ತೀರ್ಪು ಬಂದರೆ ಸಿದ್ದರಾಮಯ್ಯಗೆ ರಿಲೀಫ್ ಸಿಗಲಿದೆ.. ಸಿಎಂ ಸ್ಥಾನ ಕೂಡಾ ಭದ್ರವಾಗಲಿದೆ.. ರಾಜ್ಯಪಾಲರು ಹಾಗೂ ವಿಪಕ್ಷಗಳಿಗೆ ಹಿನ್ನಡೆಯಾಗಲಿದೆ.. ಒಂದು ವೇಳೆ ಕೋರ್ಟ್ ರಾಜ್ಯಪಾಲರ ಆದೇಶ ಪುರಸ್ಕರಿಸಿದರೆ ಸಿಎಂಗೆ ಕಾನೂನು ಸಂಕಷ್ಟ ಎದುರಾಗಲಿದೆ.. ಖಾಸಗಿ ದೂರುಗಳಿಗೆ ಜೀವ ಬರಲಿದ್ದು, ಸಿಎಂ ವಿರುದ್ಧ ಎಫ್‌ಐಆರ್ ದಾಖಲಾಗುವ ಸಾಧ್ಯತೆ ಇದೆ.. ಜನಪ್ರತಿನಿಧಿಗಳ ನ್ಯಾಯಾಲಯ ಖಾಸಗಿ ದೂರುಗಳನ್ನು ಪುರಸ್ಕರಿಸಿ ಸಿಎಂ ವಿರುದ್ಧ ತನಿಖೆಗೆ ಆದೇಶ ನೀಡಿದರೆ, ಸಿಎಂ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ತನಿಖೆ ಎದುರಿಸಬೇಕಾದ ಅನಿವಾರ್ಯತೆ ಎದುರಾಗಬಹುದು..