ರಾಹುಲ್ ಗಾಂಧಿಗೆ ಜೈಲು ಶಿಕ್ಷೆ ಹಿನ್ನೆಲೆ; ಸಂಸತ್ ಸ್ಥಾನದಿಂದ ಅನರ್ಹ
ನವದೆಹಲಿ; ಸೂರತ್ ಕೋರ್ಟ್ ರಾಹುಲ್ ಗಾಂಧಿಯವರು ಎರಡು ವರ್ಷ ಜೈಲು ಶಿಕ್ಷೆ ವಿಧಿಸಿದೆ. ಹೀಗಾಗಿ ರಾಹುಲ್ ಗಾಂಧಿಯವರನ್ನು ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಿ ಲೋಕಸಭಾ ಸೆಕ್ರೆಟ್ರಿಯೇಟ್ ಆದೇಶ ಹೊರಡಿಸಿದೆ. ಹೀಗಾಗಿ ರಾಹುಲ್ ಗಾಂಧಿಯವರು ಇನ್ನು ಆರು ವರ್ಷಗಳ ಕಾಲ ಚುನಾವಣೆಗೆ ನಿಲ್ಲುವಂತಿಲ್ಲ.
ಈಗಿರುವ ಕಾನೂನು ಪ್ರಕಾರ ಯಾವುದೇ ಪ್ರಕರಣದಲ್ಲಿ ಎರಡು ವರ್ಷಕ್ಕಿಂತ ಹೆಚ್ಚು ಜೈಲು ಶಿಕ್ಷೆಗೆ ಗುರಿಯಾದ ಜನಪ್ರತಿನಿಧಿ ಸಂಸತ್ ಅಥವಾ ವಿಧಾನಸಭೆಯ ಸದಸ್ಯತ್ವ ಕಳೆದುಕೊಳ್ಳುತ್ತಾರೆ. ಜೊತೆಗೆ ಜೈಲು ಶಿಕ್ಷೆ ಪೂರ್ಣಗೊಂಡ ನಂತರ ಆರು ವರ್ಷಗಳವರೆಗೆ ಯಾವುದೇ ಚುನಾವಣೆಗೆ ಸ್ಪರ್ಧಿಸುವಂತಿಲ್ಲ ಎಂಬ ನಿಯಮವಿದೆ.
೨೦೧೯ರಲ್ಲಿ ಕೋಲಾರದಲ್ಲಿ ರಾಹುಲ್ ಗಾಂಧಿ ಭಾಷಣ ಮಾಡುವಾಗ ಮೋದಿ ಹೆಸರಿನವರೆಲ್ಲರೂ ಕಳ್ಳರೇ ಆಗಿರುತ್ಥಾರೆ ಎಂಬ ರೀತಿಯಲ್ಲಿ ಮಾತನಾಡಿದ್ದರು. ಇದರಿಂದಾಗಿ ಮಾನನಷ್ಟ ಆಗಿದೆ ಎಂದು ಎಂದು ಮೋದಿ ಸರ್ ನೇಮ್ ಇರುವ ಬಿಜೆಪಿ ಶಾಸಕರೊಬ್ಬರು ಸೂರತ್ ಕೋರ್ಟ್ ಮೆಟ್ಟಿಲೇರಿದ್ದರು. ಕೋರ್ಟ್ ನಿನ್ನೆ ರಾಹುಲ್ ಗಾಂಧಿಗೆ ಎರಡು ವರ್ಷ ಜೈಲು ಶಿಕ್ಷೆ ನೀಡಿ ಆದೇಶ ಹೊರಡಿಸಿತ್ತು.