ರಾಜೀವ್ ಗಾಂಧಿ ಹತ್ಯೆ ಪ್ರಕರಣ; ದೋಷಿ ಪೆರಾರಿವಾಲನ್ ರಿಲೀಸ್
ನವದೆಹಲಿ: ರಾಜೀವ್ ಗಾಂಧಿ ಹತ್ಯೆ ಪ್ರಕರಣದ ದೋಷಿ ಎ.ಜಿ.ಪೆರಾರಿವಾಲನ್ ಅವರನ್ನು ಬಿಡುಗಡೆ ಮಾಡುವಂತೆ ಸುಪ್ರೀಂ ಕೋರ್ಟ್ ಮಂಗಳವಾರ ಆದೇಶಿಸಿದೆ.
ಈ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಏಳು ಅಪರಾಧಿಗಳಲ್ಲಿ ಪೆರಾರಿವಾಲನ್ ಕೂಡ ಒಬ್ಬರು. ಅವರೊಂದಿಗೆ ಸಂತಾನ್, ಮುರುಗನ್, ನಳಿನಿ, ರಾಬರ್ಟ್ ಪಾಯಸ್, ಜಯಕುಮಾರ್ ಮತ್ತು ರವಿಚಂದ್ರನ್ ಇದ್ದಾರೆ.
1991ರ ಸಾರ್ವತ್ರಿಕ ಚುನಾವಣೆಯ ಸಂದರ್ಭದಲ್ಲಿ ರಾಜೀವ್ ಗಾಂಧಿ ಅವರು ತಮಿಳುನಾಡಿನ ಶ್ರೀಪೆರಂಬುದೂರಿನಲ್ಲಿ ಚುನಾವಣಾ ಪ್ರಚಾರದ ವೇಳೆ ಆತ್ಮಾಹುತಿ ಬಾಂಬ್ ದಾಳಿಯಲ್ಲಿ ಮೃತಪಟ್ಟಿದ್ದರು.