BengaluruCrime

Rameshwaram cafe; ರಾಮೇಶ್ವರಂ ಬ್ಲಾಸ್ಟ್‌ ಬಗ್ಗೆ ಸಿಎಂ ಹಾಗೂ ಡಿಸಿಎಂ ಹೇಳಿದ್ದೇನು..?

ಬೆಂಗಳೂರು; ರಾಮೇಶ್ವರಂ ಕೆಫೆಯಲ್ಲಿ ಮಧ್ಯಾಹ್ನ ಸ್ಫೋಟ ಸಂಭವಿಸಿದ್ದು, ಯಾರೋ ಒಬ್ಬ ಬ್ಯಾಗ್‌ ಇಟ್ಟುಹೋಗಿದ್ದು, ಅದರಿಂದ ಸ್ಫೋಟ ಸಂಭವಿಸಿದೆ ಎಂದು ಹೇಳಲಾಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿರುವ ಅವರು, ಇದು ಇಫ್ರೂವೈಸ್ಡ್‌ ಬ್ಲಾಸ್ಟ್‌ ಎಂದು ಗೊತ್ತಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಯಾರು ಮಾಡಿದ್ದಾರೆ ಎಂಬುದು ತನಿಖೆಯಿಂದ ಗೊತ್ತಾಗಲಿದೆ ಎಂದು ಹೇಳಿದರು.

ಇನ್ನು ತುಮಕೂರಿನ ಕುಣಿಗಲ್‌ ನಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಕೂಡಾ ಈ ಬಗ್ಗೆ ಮಾತನಾಡಿದ್ದಾರೆ. “ರಾಮೇಶ್ವರಂ ಕೆಫೆಯಲ್ಲಿನ ಸ್ಫೋಟದ ಬಗ್ಗೆ ಅಧಿಕಾರಿಗಳು ತನಿಖೆ ಮಾಡುತ್ತಿದ್ದಾರೆ. ಬೆಂಗಳೂರಿನ ಯಾರೂ ಆತಂಕ ಪಡುವ ಅಗತ್ಯವಿಲ್ಲ” ಎಂದು ಡಿಸಿಎಂ ಡಿ.ಕೆ. ಅವರು ಶಿವಕುಮಾರ್ ತಿಳಿಸಿದರು.

“ಈ ಸ್ಫೋಟವನ್ನು ಯಾರು, ಯಾವ ಕಾರಣಕ್ಕೆ ಮಾಡಿದ್ದಾರೆ. ಇದು ವ್ಯಾಪಾರದ ವೈರಿಗಳೇ ಮಾಡಿದ್ದೇ ಅಥವಾ ಬೇರೆ ಉದ್ದೇಶದಿಂದ ಮಾಡಿದ್ದಾರೆಯೇ ಎಂದು ಅಧಿಕಾರಿಗಳು ತನಿಖೆ ಮಾಡುತ್ತಿದ್ದಾರೆ.

ರಾಮೇಶ್ವರಂ ಕೆಫೆ ಸುತ್ತಮುತ್ತಲ ಪ್ರದೇಶದ ಸಿಸಿಟಿವಿ ಕ್ಯಾಮೆರಾಗಳ ವಿಡಿಯೋ ಇದೆ. ಸುಮಾರು 2 ಕಿ.ಮೀ. ವ್ಯಾಪ್ತಿಯಲ್ಲಿ ಯಾರು ಬಂದು ಹೋಗಿದ್ದಾರೆ ಎಂಬ ಬಗ್ಗೆ ಪರಿಶೀಲನೆ ನಡೆದಿದೆ. ಸದ್ಯಕ್ಕೆ ಯಾರಿಗೂ ತೊಂದರೆ ಆಗಿಲ್ಲ. ಬೆಂಗಳೂರಿನಲ್ಲಿ ಯಾರೂ ಆತಂಕ ಪಡುವ ಅಗತ್ಯವಿಲ್ಲ. ಕೆಲವರು ಶಾಂತಿ ಕದಡಲು ಪ್ರಯತ್ನ ಮಾಡುತ್ತಿದ್ದಾರೆ. ನಾವು ರಕ್ಷಣೆ ನೀಡುತ್ತೇವೆ” ಎಂದು ತಿಳಿಸಿದರು.

ಈ ಸ್ಫೋಟದಲ್ಲಿ ಐಇಡಿ ಬಳಸಲಾಗಿದೆ ಎಂಬುದರ ಬಗ್ಗೆ ಕೇಳಿದಾಗ, “ಅಧಿಕಾರಿಗಳಿಂದ ಸಂಪೂರ್ಣ ಮಾಹಿತಿ ಪಡೆದು ನಂತರ ಪ್ರತಿಕ್ರಿಯೆ ನೀಡುತ್ತೇನೆ” ಎಂದು ತಿಳಿಸಿದರು.

Share Post