Crime

ಮದುವೆಗೆ ಬಂದಿದ್ದ ಅಪ್ರಾಪ್ತೆಯ ಮೇಲೆ ಅತ್ಯಾಚಾರ

ಲಕ್ನೋ:  ಅಪ್ರಾಪ್ತ ಬಾಲಕಿಯ ಮೇಲೆ ಯುವಕನೊಬ್ಬ ಅತ್ಯಾಚಾರವೆಸಗಿದ ಪ್ರಕರಣ ಉತ್ತರ ಪ್ರದೇಶದ ವಾರಣಾಸಿಯಲ್ಲಿ ಇದೀಗ ಬೆಳಕಿಗೆ ಬಂದಿದೆ.

ಆರೋಪಿಯನ್ನು ನಿಸಾರ್(27) ಎಂದು ಗುರುತಿಸಲಾಗಿದೆ. ಈತ ವೃತ್ತಿಯಲ್ಲಿ ನೇಕಾರ. ಈ ಘಟನೆ ಸಿಗ್ರಾದ ಲಲ್ಲಾಪುರದಲ್ಲಿ ನಡೆದಿದೆ.

ಮದುವೆಗೆಂದು ತನ್ನ ಅಜ್ಜಿಯ ಜೊತೆ 6 ವರ್ಷದ ಬಾಲಕಿ ಲಲ್ಲಾಪುರಕ್ಕೆ ಹೋಗಿದ್ದಳು. ನಿಸ್ಸಾರ್ ಆ ಬಾಲಕಿಯನ್ನು ತನ್ನೊಂದಿಗೆ ಕೆರೆದೊಯ್ದು ಅತ್ಯಾಚಾರ ಎಸಗಿದ್ದಾನೆ.

ಭಾನುವಾರ ಈ ಘಟನೆ ನಡೆದಿದ್ದು, ಆರೋಗ್ಯದಲ್ಲಿ ಏರುಪೇರಾದಾಗ ಈ ಅಮಾನವೀಯ ಕೃತ್ಯವನ್ನು ಬಾಲಕಿಯು ಮನೆಯವರಿಗೆ ತಿಳಿಸಿದ್ದಾಳೆ. ಈ ಬಗ್ಗೆ ಸಂತ್ರಸ್ತೆಯ ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ನಿಸಾರ್ ವಿರುದ್ಧ ದೂರು ದಾಖಲಿಸಿದ್ದಾರೆ. ಘಟನೆಯ ನಂತರ ಆರೋಪಿ ತಲೆಮರೆಸಿಕೊಂಡಿದ್ದು, ಆರೋಪಿಗಾಗಿ ಶೋಧ ನಡೆಯುತ್ತಿದೆ.

Share Post