ರೇಪ್ ಕೇಸ್ ದಾಖಲು; ಪ್ರಜ್ವಲ್ ರೇವಣ್ಣಗೆ ಬಂಧನದ ಭೀತಿ!
ಬೆಂಗಳೂರು; ಲೈಂಗಿಕ ದೌರ್ಜನ್ಯ ಆರೋಪ ಎದುರಿಸುತ್ತಿರುವ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ.. ಅವರ ವಿರುದ್ಧ ಹೊಳೆನರಸೀಪುರ ಠಾಣೆಯಲ್ಲಿ ರೇಪ್ ಕೇಸ್ ದಾಖಲಾಗಿದ್ದು, ಬಂಧನದ ಭೀತಿ ಹೆಚ್ಚಾಗಿದೆ..
ಈ ಹಿಂದೆ ಮಹಿಳೆಯರೊಬ್ಬರು ಲೈಂಗಿಕ ಕಿರುಕುಳ ನೀಡಿದಾರೆ ಎಂದು ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣ ಅವರ ವಿರುದ್ಧ ದೂರು ನೀಡಿದ್ದರು.. ಇದೀಗ ಮತ್ತೊಬ್ಬ ಮಹಿಳೆ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪ ಮಾಡಿದ್ದು, ಅತ್ಯಾಚಾರ ಕೇಸ್ ದಾಖಲು ಮಾಡಿದ್ದಾರೆ..
ಪ್ರಕರಣದ ವಿಚಾರಣೆ ನಡೆಸುತ್ತಿರುವ ಎಸ್‌ಐಟಿ ಅಧಿಕಾರಿಗಳು, ವಿಡಿಯೋಗಳಲ್ಲಿರುವ ಮಹಿಳೆಯರನ್ನು ಗುರುತಿಸಿ ಅವರನ್ನು ಕರೆಸಿ ಮಾಹಿತಿ ಕಲೆ ಹಾಕುತ್ತಿದ್ದಾರೆ.. ಇದೇ ರೀತಿ ಮಹಿಳೆಯೊಬ್ಬರನ್ನು ಭೇಟಿ ಮಾಡಿ ಮಾಹಿತಿ ಕೇಳಿದಾಗ ಆಕೆ ಎಲ್ಲವನ್ನೂ ವಿವರಿಸಿದ್ದರು.. ಇದೀಗ ಅಧಿಕಾರಿಗಳ ಸೂಚನೆ ಮೇರೆಗೆ ದೂರು ನೀಡಲಾಗಿದೆ.. ಈಗಾಗಲೇ ಲೈಂಗಿಕ ದೌರ್ಜನ್ಯ ಆರೋಪದಡಿ ದಾಖಲಾಗಿದ್ದ ಎಫ್ಐಆರ್ಗೆ ಹೊಸದಾಗಿ ಐಪಿಸಿ ಸೆಕ್ಷನ್ 376 ಅನ್ನು ಸೇರ್ಪಡೆ ಮಾಡಲಾಗಿದೆ..
ಹಲವು ಆಮಿಷವೊಡ್ಡಿ ಪ್ರಜ್ವಲ್ ರೇವಣ್ಣ ಅವರು ಅತ್ಯಾಚಾರ ಎಸಗಿದ್ದಾರೆ ಎಂದು ಸಂತ್ರಸ್ತೆ ನ್ಯಾಯಾಧೀಶರ ಮುಂದೆ ಹೇಳಿದ್ದಾರೆ ಎಂದು ತಿಳಿದುಬಂದಿದೆ.. 2ನೇ ಎಫ್ಐಆರ್ನಲ್ಲಿ ಐಪಿಸಿ 376(2) ಎನ್, 506, 354 ಎ1, 354ಬಿ, 354ಸಿ ಹಾಗೂ ಐಟಿ ಕಾಯ್ದೆ ಅಡಿ ಎಫ್ಐಆರ್ ದಾಖಲಾಗಿದೆ.