CrimeNational

ಭೀಕರ ರಸ್ತೆ ಅಪಘಾತ; ಸ್ಥಳದಲ್ಲೇ 17 ಮಂದಿ ದುರ್ಮರಣ

ನಾದಿಯಾ (ಪಶ್ಚಿಮ ಬಂಗಾಳ): ಇಲ್ಲಿನ ಹನ್ಸಖಲಿ ಬಳಿ ಶನಿವಾರ ನಡೆದ ಭೀಕರ ಅಪಘಾತದಲ್ಲಿ 17 ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ. ನಿಂತಿದ್ದ ಟ್ರಕ್‌ಗೆ ಪ್ರಯಾಣಿಕರನ್ನು ತುಂಬಿದ್ದ ಮೆಟಾಡೋರ್‌ ಡಿಕ್ಕಿ ಹೊಡೆದಿದ್ದರಿಂದ ಈ ದುರಂತ ಸಂಭವಿಸಿದೆ ಎಂದು ತಿಳಿದುಬಂದಿದೆ.

ದುರ್ಘಟನೆಯಲ್ಲಿ 17 ಮಂದಿ ಸಾವನ್ನಪ್ಪಿದ್ದಾರೆ. ಉಳಿದ ಐದು ಮಂದಿ ತೀವ್ರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳದಲ್ಲಿ ದಟ್ಟ ಮಂಜು ಆವರಿಸಿತ್ತು. ಜೊತೆಗೆ ಮೆಟಾಡೋರ್‌ ಚಾಲಕ ಅತಿ ವೇಗದಿಂದ ವಾಹನ ಓಡಿಸುತ್ತಿದ್ದಾರೆ. ಈ ಕಾರಣದಿಂದಾಗಿ ರಸ್ತೆ ಬದಿ ನಿಲ್ಲಿಸಿದ್ದ ಟ್ರಕ್‌, ಮೆಟಾಡೋರ್‌ ಚಾಲಕನಿಗೆ ಕಾಣಿಸಿಲ್ಲ. ಹೀಗಾಗಿ ಅತಿವೇಗದಿಂದ ಹೋಗಿ ಟ್ರಕ್‌ಗೆ ಡಿಕ್ಕಿ ಹೊಡೆದಿದ್ದಾನೆ. ಚಾಲಕನ ಅಜಾಗರೂಕತೆಯಿಂದ 17 ಮಂದಿ ಜೀವ ಕಳೆದುಕೊಂಡಿದ್ದಾರೆ.

Share Post