CrimeNational

ಫುಟ್‌ಪಾತ್‌ನಲ್ಲಿ ಮೂವರ ಮೇಲೆ ಹರಿದ ಕಾರು: ಓರ್ವ ಮಹಿಳೆ ಸಾವು

ವಿಜಯವಾಡ: ಆಂಧ್ರಪ್ರದೇಶದ ವಿಜಯವಾಡದಲ್ಲಿ ಭೀಕರ ರಸ್ತೆ ಅಪಘಾತ ನಡೆದಿದೆ. ದುರಂತದಲ್ಲಿ ಓರ್ವ ಮಹಿಳೆ ಸಾವನ್ನಪ್ಪಿದ್ದು, ಇನ್ನಿಬ್ಬರು ಗಂಭಿರವಾಗಿ ಗಾಯಗೊಂಡಿದ್ದಾರೆ. ವಿಜಯವಾಡ ಬೆಂಚ್ ಸರ್ಕಲ್ ಬಳಿಯ ಮೇಲ್ಸೇತುವೆಯಲ್ಲಿ ಕಸ ಗುಡಿಸಿ ಸ್ವಚ್ಛತಾ ಕಾರ್ಯ ಮಾಡುತ್ತಿದ್ದ ಸಿಬ್ಬಂದಿಗೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದೆ. ವೇಗವಾಗಿ ಬಂದ ಕಾರು ಮೂವರ ಮೇಲೆ ಹರಿದಿದೆ. ಅಪಘಾತದಲ್ಲಿ ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಗಾಯಗೊಂಡವರನ್ನು 108 ವಾಹನದಲ್ಲಿ ವಿಜಯವಾಡ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಅತಿಯಾದ ವೇಗ ಅಪಘಾತಕ್ಕೆ ಕಾರಣ ಎಂದು ಪೊಲೀಸರು ಶಂಕಿಸಿದ್ದಾರೆ. ಪಾಲಿಕೆ ಸಿಬ್ಬಂದಿಗೆ ಡಿಕ್ಕಿ ಹೊಡೆದ ನಂತರ ಕಾರು ಆಟೋಗೂ ಡಿಕ್ಕಿ ಹೊಡೆದಿದೆ.  ಆಟೋ ಸಂಪೂರ್ಣ ನಜ್ಜುಗುಜ್ಜಾಗಿದೆ.

ದುರಂತಕ್ಕೆ ಕಾರಣವನ್ನು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.  ವೇಗವಾಗಿ ಬರುತ್ತಿದ್ದಾಗ ಕಾರಿನ ಟೈರ್ ಬ್ಲಾಸ್ಟ್‌ ಆದ ಕಾರಣ ಅಪಘಾತ ಸಂಭವಿಸಿದೆಯೇ? ಅಥವಾ ಕಾರು ಚಾಲಕ ಮದ್ಯಪಾನ ಮಾಡಿ ಕಾರು ಚಲಾಯಿಸುತ್ತಿದ್ದನೇ..ಎಂಬ ಹಲವು ಅನುಮಾನಗಳು ಉದ್ಭವವಾಗಿವೆ. ಘಟನೆ ನಡೆದ ಬಳಿಕ ಕಾರಿನ ಮಾಲೀಕರಿಗೆ ಪೊಲೀಸರು ಸಂಪೂರ್ಣ ಮಾಹಿತಿ ನೀಡಿದ್ದಾರೆ. ಪ್ರಸ್ತುತ ಕಾರು ಚಾಲಕನನ್ನು ವಶಕ್ಕೆ ಪಡೆದು ವಿಚಾರಣೆಯನ್ನು ನಡೆಸಲಾಗುತ್ತಿದೆ.

Share Post