ರಾಜಸ್ಥಾನ್‌ನಲ್ಲಿ ಭೀಕರ ರಸ್ತೆ ದುರಂತ-ಆರೋಪಿ ಸೇರಿದಂತೆ ಐವರು ದುರ್ಮರಣ
ರಾಜಸ್ಥಾನ: ಬೆಳ್ಳಂಬೆಳಗ್ಗೆ ಜವರಾಯ ಅಟ್ಟಹಾಸ ಮೆರೆದಿದ್ದಾನೆ. ಆರೋಪಿಯನ್ನು ಕರೆತರುತ್ತಿದ್ದ ವಾಹನ ರಸ್ತೆ ಅಪಘಾತಕ್ಕೀಡಾಗಿ ನಾಲ್ವರು ಪೊಲೀಸರು, ಓರ್ವ ಆರೋಪಿ ಸೇರಿದಂತೆ ಒಟ್ಟು ಐದು ಮಂದಿ ಮೃತಪಟ್ಟಿರುವ ದುರಂತ ಘಟನೆ ರಾಜಸ್ಥಾನದ ಜೈಪುರ ಜಿಲ್ಲೆಯ ಕೊಟ್‌ಪುಟ್ಲಿ ಪ್ರದೇಶದಲ್ಲಿ ನಡೆದಿದೆ. ಪೊಲೀಸ್ ವಾಹನ ಡಿವೈಡರ್ ಮೇಲಿದ್ದ ಮರಕ್ಕೆ ಡಿಕ್ಕಿ ಹೊಡೆದಿದೆ. ಮೃತರು ಗುಜರಾತ್ ರಾಜ್ಯ ಪೊಲೀಸ್ ಇಲಾಖೆಯ ಪೊಲೀಸ್ ಸಿಬ್ಬಂದಿ ಎನ್ನಲಾಗಿದೆ. ಆರೋಪಿಯೊಬ್ಬನನ್ನು ದೆಹಲಿಯಿಂದ ಗುಜರಾತ್‌ಗೆ ಸ್ಥಳಾಂತರಿಸುತ್ತಿದ್ದಾಗ ಈ ಅವಘಡ ಸಂಭವಿಸಿದೆ.
ಅಪಘಾತದಲ್ಲಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಅದರಲ್ಲಿದ್ದ ಐವರು ಸಾವನ್ನಪ್ಪಿದ್ದಾರೆ. ಅಪಘಾತದ ಬಗ್ಗೆ ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ವಿಷಾದ ವ್ಯಕ್ತಪಡಿಸಿದ್ದಾರೆ. ಮೃತರ ಕುಟುಂಬಗಳಿಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಅಪಘಾತದ ಬಗ್ಗೆ ಮಾಹಿತಿ ಪಡೆದ ಜಯಪುರ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿಯನ್ನು ಅವಲೋಕಿಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ.
Very sad news.May almighty God give strength to the family to bear this loss.Gujarat police stands by the family in this moment of sorrow.May their soul rest in peace.?? https://t.co/l9iOdgt6MH
— DGP Gujarat (@dgpgujarat) February 15, 2022
ಅಪಘಾತಕ್ಕೆ ಕಾರಣ ಸ್ಪಷ್ಟವಾಗಿಲ್ಲವಾದರೂ.. ಮಂಜು ಹಾಗೂ ಚಾಲಕ ನಿದ್ದೆಗೆಟ್ಟಿರುವುದು ಅಪಘಾತಕ್ಕೆ ಕಾರಣವಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಘಟನೆಯ ಕುರಿತು ಭಬ್ರು ಪೊಲೀಸರು ಗುಜರಾತ್ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಘಟನೆ ಸಂಬಂಧ ಎರಡೂ ರಾಜ್ಯಗಳ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.