CrimeNational

ಅನಂತಪುರ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ: ಮೂವರು ದಾರುಣ ಸಾವು

ಅನಂತಪುರ: ಮೂರು ದಿನಗಳ ಹಿಂದೆ ನಲ್ಲಮಾಡ ವಲಯದ ಪುಲಗಂಪಲ್ಲಿಯಲ್ಲಿ ಬುಧವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದ ಘಟನೆ ಮಾಸುವ ಮುನ್ನವೇ ಮತ್ತೊಂದು ದುರಂತದಲ್ಲಿ ಮೂವರು ಸಾವನ್ನಪ್ಪಿರುವ ಘಟನೆ ನಡೆದಿದೆ. ಅನಂತಪುರ ಜಿಲ್ಲೆಯ ರಾಪ್ತಾಡು ವಲಯದ ರನ್ನೇಪಲ್ಲಿಯಲ್ಲಿ ಬುಧವಾರ ಬೆಳಗ್ಗೆ ರಸ್ತೆ ಅಪಘಾತ ಸಂಭವಿಸಿದೆ. ಕೆಟ್ಟು ನಿಂತಿದ್ದ ಮಿನಿ ಲಾರಿ ಮತ್ತೊಂದು ವಾಹನದ ಸಹಾಯದಿಂದ ಚಲಿಸುತ್ತಿದ್ದಾಗ  ಎದುರಿನಿಂದ ಬಂದ ಲಾರಿ ಡಿಕ್ಕಿ ಹೊಡೆದಿದೆ.

ಮಿನಿ ಟ್ರಕ್  ವಾಹನದಲ್ಲಿದ್ದ ಒಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಥಳೀಯರಿಂದ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕಾಗಮಿಸಿ ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಇಬ್ಬರು ಮೃತಪಟ್ಟಿದ್ದಾರೆ ಎಂದು ಪೊಲೀಸರು ಖಚಿತಪಡಿಸಿದ್ದಾರೆ. ಮಧ್ಯರಾತ್ರಿ 2 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಅನಂತಪುರ ಜಿಲ್ಲೆಯಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 44, 42 ಹಾಗೂ ರಾಜ್ಯ ಹೆದ್ದಾರಿ 57, 61 ಮತ್ತು 64ರಲ್ಲಿ ಪದೇ ಪದೇ ಅಪಘಾತಗಳು ಸಂಭವಿಸುತ್ತಿವೆ. ಕರ್ನಾಟಕದ ಗಡಿಭಾಗ ಬಾಗೇಪಲ್ಲಿವರೆಗೆ ಅದರಲ್ಲೂ ಅನಂತಪುರ ದಾಟಿದ ನಂತರ ಹೆಚ್ಚಿನ ಅಪಘಾತಗಳು ಸಂಭವಿಸುತ್ತವೆ ಎಂದು ಪೊಲೀಸ್ ಅಂಕಿಅಂಶಗಳು ಹೇಳುತ್ತವೆ.

Share Post