CrimeNational

ಕೇಂದ್ರ ಸರ್ಕಾರದ ಮಾಜಿ ನೌಕರನ ಬಳಿ 20 ಕೋಟಿ ನಗದು ಪತ್ತೆ

ನವದೆಹಲಿ; ಕೇಂದ್ರ ಸರ್ಕಾರದ ಮಾಜಿ ನೌಕರನೊಬ್ಬನಿಗೆ ಸೇರಿದ ಆಸ್ತಿಗಳಲ್ಲಿ ಸುಮಾರು 20 ಕೋಟಿ ರೂಪಾಯಿ ನಗದು ಸಿಕ್ಕಿದೆ. ಸಿಬಿಐ ದಾಳಿ ವೇಳೆ ಭಾರಿ ಮೊತ್ತದ ನಗದು ಪತ್ತೆಯಾಗಿದ್ದು, ಸಿಬಿಐ ಅಧಿಕಾರಿಗಳು ಅದನ್ನು ವಶಪಡಿಸಿಕೊಂಡಿದ್ದಾರೆ.

ಸಾರ್ವಜನಿಕ ವಲಯದ ನೀರು ಮತ್ತು ವಿದ್ಯುತ್ ಸಲಹಾ ಸೇವೆ ಮಾಜಿ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕನಾಗಿದ್ದ ರಾಜೇಂದರ್ ಕುಮಾರ್ ಗುಪ್ತಾ ಅವರಿಗೆ ಸೇರಿದ ನಗದು ಇದಾಗಿದೆ. ದೆಹಲಿ ಸೇರಿ ವಿವಿಧ ರಾಜ್ಯಗಳ 19 ಕಡೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ವೇಳೆ ಅಪಾರ ಪ್ರಮಾಣದ ಅಕ್ರಮ ಆಸ್ತಿ ಪತ್ತೆಯಾಗಿದೆ. ಜೊತೆಗೆ 20 ಕೋಟಿ ರೂಪಾಯಿ ನಗದು ಸಿಕ್ಕಿದೆ.

ಇವರ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ಸಿಬಿಐ ಪ್ರಕರಣ ದಾಖಲಿಸಿದ್ದು, ಇದರ ಆಧಾರದ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

 

Share Post