ವಿವಾದಾತ್ಮಕ ಲೇಖಕ ಸಲ್ಮಾನ್ ರಶ್ದಿ ಸ್ಥಿತಿ ಗಂಭೀರ; ವೆಂಟಿಲೇಟರ್‌ನಲ್ಲಿ ಚಿಕಿತ್ಸೆ
ನ್ಯೂಯಾರ್ಕ್; ಅಮೆರಿಕದಲ್ಲಿ ಚಾಕು ಇರಿತದಿಂದ ಗಾಯಗೊಂಡಿರುವ ಲೇಖಕ ಸಲ್ಮಾನ್ ರಶ್ದಿ ಅವರ ಸ್ಥಿತಿ ಗಂಭೀರವಾಗಿದೆ. ಅವರ ಒಂದು ಕಣ್ಣು ದೃಷ್ಟಿ ಕಳೆದುಕೊಳ್ಳುವ ಸಾಧ್ಯತೆ ಇದೆ. ಜೊತೆಗೆ ಯಕೃತ್ತಿಗೂ ಚಾಕು ಇರಿದಿರುವುದರಿಂದ ಅದು ಬಹುತೇಕ ಹಾನಿಯಾಗಿದೆ. ಹೀಗಾಗಿ, ಸಲ್ಮಾನ್ ರಶ್ದಿಅವರಿಗೆ ವೆಂಟಿಲೇಟರ್‌ನಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ.
ವಿವಾದಾತ್ಮಕ ಲೇಖನಗಳ ಮೂಲಕ ಹೆಸರಾಗಿರುವ ಸಲ್ಮಾನ್ ರಶ್ದಿ, ದಶಕದಿಂದಲೂ ಜೀವ ಬೆದರಿಕೆ ಎದುರಿಸುತ್ತಿದ್ದರು. ನಿನ್ನೆ ನ್ಯೂಯಾರ್ಕ್ನಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿ ಉಪನ್ಯಾಸ ನೀಡುತ್ತಿದ್ದಾಗ ನ್ಯೂಜೆರ್ಸಿಯ ಫೇರ್ವ್ಯೂನ ಹದಿ ಮತರ್(24) ಎಂಬಾತ ಚಾಕುವಿನಿಂದ ಸತತವಾಗಿ ಇರಿದಿದ್ದಾನೆ.
12- 14 ಕಡೆ ರಶ್ದಿ ದೇಹಕ್ಕೆ ಚಾಕುವಿನಿಂದ ಇರಿಯಲಾಗಿದೆ. ಇದರಿಂದ ಕಣ್ಣು, ಯಕೃತ್ತು ಭಾಗಕ್ಕೆ ಗಂಭೀರ ಗಾಯವಾಗಿದೆ. ಇದರಿಂದ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಈವರೆಗೂ ಅವರು ಮಾತನಾಡುತ್ತಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.