ವಿದ್ಯಾರ್ಥಿನಿಯರಿಗೆ ಅಶ್ಲೀಲ ವಿಡಿಯೋ ತೋರಿಸಿ ಲೈಂಗಿಕ ಕಿರುಕುಳ!
ಜೈಪುರ್; ಸರ್ಕಾರಿ ಶಾಲೆಯ ಶಿಕ್ಷಕನೊಬ್ಬ ಐದನೇ ತರಗತಿ ವಿದ್ಯಾರ್ಥಿನಿಯರಿಗೆ ಅಶ್ಲೀಲ ವಿಡಿಯೋಗಳನ್ನು ತೋರಿಸಿ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪ ಕೇಳಿಬಂದಿದೆ.. ರಾಜಸ್ಥಾನದ ಜೈಪುರದ ಟೋಂಕ್ ಎಂಬಲ್ಲಿ ಈ ಘಟನೆ ನಡೆದಿದೆ.. ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ..
ಸರ್ಕಾರಿ ಶಾಲೆ ಶಿಕ್ಷಕ ಲಾಯಿಕ್ ಅಹ್ಮದ್ ಖುರೇಷಿ ಎಂದು ಗುರುತಿಸಲಾಗಿದೆ.. ಆರೋಪಿ ಅಹ್ಮದ್ ಖುರೇಷಿ ಗೋಪಾಲಪುರ ಗ್ರಾಮದಲ್ಲಿ ಸರ್ಕಾರಿ ಶಾಲೆ ಶಿಕ್ಷಕನಾಗಿ ಕೆಲಸ ಮಾಡುತ್ತಾನೆ.. ಈತ ಐದನೇ ತರಗತಿಯ ಬಾಲಕಿಯರಿಗೆ ಅಶ್ಲೀಲ ವಿಡಿಯೋಗಳನ್ನು ತೋರಿಸಿ ಲೈಂಗಿಕ ಕಿರುಕುಳ ನೀಡಿದ್ದಾನೆ.. ಹೀಗಾಗಿ ವಿದ್ಯಾರ್ಥಿನಿಯರು ಶಾಲೆಯಲ್ಲಿ ನಡೆದ ಘಟನೆಯನ್ನು ಪೋಷಕರಿಗೆ ತಿಳಿಸಿದ್ದಾರೆ.. ಪೋಷಕರು ಶಿಕ್ಷಕ ಖುರೇಷಿ ವಿರುದ್ಧ ಕೇಸ್ ದಾಖಲು ಮಾಡಿದ್ದಾರೆ..
ಪೋಕ್ಸೋ ಕಾಯ್ದೆಯಡಿ ಪೊಲೀಸರು ಕೇಸ್ ದಾಖಲಿಸಿದ್ದರು.. ಆದ್ರೆ ಆರೋಪಿ ಸೆಪ್ಟೆಂಬರ್ 11ರಿಂದ ನಾಪತ್ತೆಯಾಗಿದ್ದ.. ಇದೀಗ ಆರೋಪಿಯನ್ನು ಪೊಲೀಸರು ಟೋಂಕ್ ಎಂಬಲ್ಲಿ ಬಂಧಿಸಿದ್ದಾರೆ.. ಆರೋಪಿಯನ್ನು ಕೋರ್ಟ್‌ಗೆ ಹಾಜರುಪಡಿಸಲಾಗಿದ್ದು, ಕೋರ್ಟ್ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ..