ಕಿರುಚಿತ್ರಕ್ಕಾಗಿ ಹಳಿ ಮೇಲೆ ಶೂಟಿಂಗ್; ರೈಲು ಡಿಕ್ಕಿಯಾಗಿ ಇಬ್ಬರ ದುರ್ಮರಣ
ನವದೆಹಲಿ; ಯುವಕರಲ್ಲಿ ಸೋಷಿಯಲ್ ಮೀಡಿಯಾ ಕ್ರೇಜ್ ಜಾಸ್ತಿಯಾಗುತ್ತಿದೆ. ಸೋಷಿಯಲ್ ಮೀಡಿಯಾದಲ್ಲಿ ವಿಡಿಯೋಗಳನ್ನು ಹಾಕೋದಕ್ಕಾಗಿ ಪ್ರಾಣ ಕಳೆದುಕೊಳ್ಳುವಂತಹ ಸಾಹಸಗಳನ್ನು ಮಾಡುತ್ತಿದ್ದಾರೆ. ಇಂತಹದ್ದೇ ಒಂದು ಘಟನೆ ದೆಹಲಿಯಲ್ಲಿ ನಡೆದಿದೆ. ಹಳಿಗಳ ಮೇಲೆ ನಿಂತು ಕಿರುಚಿತ್ರಕ್ಕಾಗಿ ಮೊಬೈಲ್ ನಲ್ಲಿ ಚಿತ್ರೀಕರಿಸುತ್ತಿದ್ದಾಗ, ರೈಲು ಆಗಮಿಸಿದ್ದು, ಇಬ್ಬರು ಸಾವಿಗೀಡಾಗಿದ್ದಾರೆ.
ಕಾಂತಿ ನಗರದ ಮೇಲ್ಸೇತುವೆ ಬಳಿ ಈ ದುರ್ಘಟನೆ ನಡೆದಿದೆ. ಮೃತರನ್ನು ಅಂತಿಮ ವರ್ಷದ ಬಿಟೆಕ್ ವಿದ್ಯಾರ್ಥಿ ವಂಶ್ ಶರ್ಮಾ (23) ಮತ್ತು ಸೇಲ್ಸ್‌ಮ್ಯಾನ್ ಮೋನು (20) ಎಂದು ಗುರುತಿಸಲಾಗಿದೆ. ಇಬ್ಬರೂ ಕಾಂತಿ ನಗರದ ನಿವಾಸಿಗಳು ಎಂದು ತಿಳಿದುಬಂದಿದೆ.