CrimeNational

ಒಂದೇ ಮನೆಯಲ್ಲಿ ಆರು ಮೃತದೇಹ; ಇದು ಆತ್ಮಹತ್ಯೆಯೋ..? ಕೊಲೆಯೋ..?

ಶ್ರೀನಗರ; ಒಂದೇ ಕುಟುಂಬದ ಆರು ಮಂದಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ಜಮ್ಮುನಲ್ಲಿ ನಡೆದಿದೆ. ಸಿದ್ರಾ ಪ್ರದೇಶದಲ್ಲಿರುವ ಮನೆಯಲ್ಲಿ ಆರೂ ಮಂದಿಯ ಮೃತದೇಹಗಳು ಪತ್ತೆಯಾಗಿವೆ. ಕಳೆದ ರಾತ್ರಿ ಮಹಿಳೆಯೊಬ್ಬರು ಕರೆ ಮಾಡಿ, ತನ್ನ ಸಹೋದರ ಫೋನ್‌ ಕರೆ ಸ್ವೀಕರಿಸುತ್ತಿಲ್ಲ ಎಂದು ಪೊಲೀಸರ ಮುಂದೆ ಆತಂಕ ವ್ಯಕ್ತಪಡಿಸಿದ್ದರು. ಪೊಲೀಸರು ಬಂದು ಪರಿಶೀಲಿಸಿದಾಗ ಆರು ಮಂದಿ ಸಾವನ್ನಪ್ಪಿರುವುದು ಪತ್ತೆಯಾಗಿದೆ.

ಮೃತರನ್ನು ಸಕೀನಾ ಬೇಗಂ, ಅವರ ಇಬ್ಬರು ಪುತ್ರಿಯರಾದ ನಸೀಮಾ ಅಖ್ತರ್ ಮತ್ತು ರುಬಿನಾ ಬಾನೋ, ಪುತ್ರ ಜಾಫರ್ ಸಲೀಂ ಮತ್ತು ಇಬ್ಬರು ಸಂಬಂಧಿಕರಾದ ನೂರ್ ಉಲ್ ಹಬೀಬ್ ಮತ್ತು ಸಜಾದ್ ಅಹ್ಮದ್ ಎಂದು ಗುರುತಿಸಲಾಗಿದೆ. ಎಲ್ಲರೂ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವಂತೆ ಮೇಲ್ನೋಟಕ್ಕೆ ಕಾಣುತ್ತಿದೆ. ಆದ್ರೆ ಈ ಬಗ್ಗೆ ಕೆಲ ಅನುಮಾನಗಳೂ ವ್ಯಕ್ತವಾಗಿವೆ. ಈ ಹಿನ್ನೆಲೆಯಲ್ಲಿ ಪ್ರಕರಣದ ತನಿಖೆ ವಿಶೇಷ ತನಿಖಾ ತಂಡ ರಚನೆ ಮಾಡಲಾಗಿದೆ.

Share Post