ಕಾಲೇಜು ಕಟ್ಟಡದ ಮೇಲಿಂದ ಬಿದ್ದು ವಿದ್ಯಾರ್ಥಿನಿ ಆತ್ಮಹತ್ಯೆ!
ಚಿತ್ರದುರ್ಗ; ಕಾಲೇಜು ಕಟ್ಟಡದ ಮೇಲಿಂದ ಬಿದ್ದು ವಿದ್ಯಾರ್ಥಿನಿಯೊಬ್ಬಳು ಸಾವನ್ನಪ್ಪಿದ್ದಾಳೆ.. ಇದು ಆತ್ಮಹತ್ಯೆಯೋ ಅಥವಾ ಆಕಸ್ಮಿಕವಾಗಿ ನಡೆದ ಘಟನೆಯೋ ಗೊತ್ತಾಗಿಲ್ಲ.. ಚಿತ್ರದುರ್ಗ ನಗರದ ಡಾನ್ ಬಾಸ್ಕೋ ಕಾಲೇಜಿನಲ್ಲಿ ಈ ಘಟನೆ ನಡೆದಿದೆ..
18 ವರ್ಷದ ಪ್ರೇಮಾ ಎಂಬ ವಿದ್ಯಾರ್ಥಿನಿಯೇ ಸಾವನ್ನಪ್ಪಿದವಳು.. ಈಕೆ ಚಳ್ಳಕೆರೆ ಮೂಲದವಳಾಗಿದ್ದು, ಡಾನ್ ಬಾಸ್ಕೋ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದಳು.. ಕಾಲೇಜಿನ ಕಟ್ಟಡದ ಮೇಲಿಂದ ಕೆಳಗೆ ಬಿದ್ದಿರುವ ಪ್ರೇಮಾ ತೀವ್ರವಾಗಿ ಗಾಯಗೊಂಡು ಸಾವನ್ನಪ್ಪಿದ್ದಾಳೆ.. ಕಟ್ಟಡದ ಮೇಲಿಂದ ಹಾರಿ ಆತ್ಮಹತೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ..
ಚಿತ್ರದುರ್ಗದ ಬಡಾವಣೆ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಿಸಲಾಗಿದೆ.. ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದಾರೆ.. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.. ನಂತರ ಪೋಷಕರಿಗೆ ಮೃತದೇಹವನ್ನು ಹಸ್ತಾಂತರ ಮಾಡಲಾಗುತ್ತದೆ.. ಸಾವಿಗೆ ಕಾರಣ ಏನು..? ಯಾರಾದರೂ ಕಿರಕುಳ ನೀಡಿದ್ದರೆ ಎಂಬುದರ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.. ಸದ್ಯಕ್ಕೆ ಯಾವುದೇ ಡೆತ್ ನೋಟ್ ಸಿಕ್ಕಿಲ್ಲ..