CrimeInternational

ಕಾಬುಲ್‌ನಲ್ಲಿ ಆತ್ಮಹತ್ಯಾ ದಾಳಿ; ಆರು ಮಂದಿ ದುರ್ಮರಣ

ಕಾಬುಲ್; ಅಫ್ಗಾನಿಸ್ತಾನದ ವಿದೇಶಾಂಗ ಸಚಿವಾಲಯದ ಕಚೇರಿ ಆತ್ಮಹತ್ಯಾ ದಾಳಿ ನಡೆದಿದೆ. ಘಟನೆಯಲ್ಲಿ 6 ಮಂದಿ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ಆಸ್ಪತ್ರೆಗೆ ಸೇರಿಸಲಾಗಿದೆ.

ಬ್ಯುಸಿನೆಸ್ ಸೆಂಟರ್ ಮುಂಭಾಗ ದಾಳಿಕೋರ ತನ್ನನ್ನು ತಾನು ಸ್ಫೋಟಿಸಿಕೊಂಡಿದ್ದಾನೆ. ಘಟನೆಯಲ್ಲಿ ಹಲವು ಗಾಯಗೊಂಡಿದ್ದು, ಅದರಲ್ಲಿ ಒಂದು ಮಗು ಕೂಡಾ ಸೇರಿದೆ ಎಂದು ಗೊತ್ತಾಗಿದೆ. ಕಳೆದ ಮೂರು ತಿಂಗಳ ಹಿಂದೆ ಇದೇ ಸ್ಥಳದಲ್ಲಿ ಇದೇ ರೀತಿಯ ದಾಳಿ ನಡೆದಿತ್ತು. ರಂಜಾನ್‌ ತಿಂಗಳ ಆರಂಭದಲ್ಲೇ ಇಂತಹ ಘಟನೆ ನಡೆದಿರುವುದು ಆಘಾತಕ್ಕೆ ಕಾರಣವಾಗಿದೆ.

Share Post