CrimeNational

ಕಾಲೇಜುಗಳಲ್ಲಿ ಹಿಜಾಬ್‌ ಧರಿಸುವ ವಿಚಾರ; ಭಿನ್ನ ತೀರ್ಪು ನೀಡಿದ ಸುಪ್ರೀಂ ದ್ವಿಸದಸ್ಯ ಪೀಠ

ನವದೆಹಲಿ; ಶಾಲಾ-ಕಾಲೇಜುಗಳಲ್ಲಿ ಹಿಜಾಬ್‌ ನಿಷೇಧಿಸಿ ಹೈಕೋರ್ಟ್‌ ನೀಡಿರುವ ತೀರ್ಪು ಪ್ರಶ್ನಿಸಿ ಸುಪ್ರೀಂನಲ್ಲಿ ಸಲ್ಲಿಕೆಯಾಗಿದ್ದ ಮೇಲ್ಮವಿ ಅರ್ಜಿಯ ತೀರ್ಪು ಹೊರಬಿದ್ದಿದೆ. ಸುಪ್ರೀಂ ಕೋರ್ಟ್‌ ದ್ವಿಸದಸ್ಯ ಪೀಠದ ನ್ಯಾಯಮೂರ್ತಿಗಳು ಈ ಪ್ರಕರಣ ಸಂಬಂಧ ಇಂದು ವಿಭಿನ್ನ ತೀರ್ಪು ನೀಡಿದ್ದಾರೆ. ನ್ಯಾಯಮೂರ್ತಿ ಹೇಮಂತ್‌ ಗುಪ್ತ ಮೇಲ್ಮನವಿಗಳನ್ನು ತಿರಸ್ಕರಿಸಿ, ಹೈಕೋರ್ಟ್‌ ತೀರ್ಪು ಎತ್ತಿ ಹಿಡಿದಿದ್ದಾರೆ. ಆದ್ರೆ ನ್ಯಾಯಮೂರ್ತಿ ಸುಧಾಂಶು ಧುಲಿಯಾ ಹೈಕೋರ್ಟ್‌ ಆದೇಶ ರದ್ದುಪಡಿಸಿದ್ದಾರೆ. ಹೀಗಾಗಿ ಪ್ರಕರಣವನ್ನು ವಿಸ್ತೃತ ಪೀಠಕ್ಕೆ ವರ್ಗಾವಣೆ ಮಾಡಲಾಗಿದೆ.

ದ್ವಿಸದಸ್ಯ ಪೀಠದ ಇಬ್ಬರೂ ನ್ಯಾಯಮೂರ್ತಿಗಳು ವಿಭಿನ್ನ ಅಭಿಪ್ರಾಯಗಳನ್ನು ಹೇಳಿದ್ದಾರೆ. ಹೀಗಾಗಿ ನ್ಯಾಯಪೀಠ ಪ್ರಕರಣದ ವಿಚಾರಣೆಗೆ ವಿಸ್ತೃತ ಪೀಠ ರಚಿಸುವಂತೆ ಮುಖ್ಯ ನ್ಯಾಯಮೂರ್ತಿಗೆ ಶಿಫಾರಸು ಮಾಡಿದೆ. ಹೀಗಾಗಿ ಪ್ರಕರಣದ ಮರು ವಿಚಾರಣೆ ನಡೆಸಿ ಅಂತಿಮ ತೀರ್ಪು ಹೊರಬರುವವರೆಗೆ ಹಿಜಾಬ್‌ ಕುರಿತು ಕರ್ನಾಟಕ ಹೈಕೋರ್ಟ್‌ ನೀಡಿರುವ ಆದೇಶ ಜಾರಿಯಲ್ಲಿರುತ್ತದೆ.

10 ದಿನಗಳ ಕಾಲ ವಾದ–ಪ್ರತಿವಾದ ಆಲಿಸಿದ್ದ ನ್ಯಾಯಮೂರ್ತಿಗಳಾದ ಹೇಮಂತ್‌ ಗುಪ್ತ ಹಾಗೂ ಸುಧಾಂಶು ಧುಲಿಯಾ ಅವರನ್ನು ಒಳಗೊಂಡ ಪೀಠವು ಸೆಪ್ಟೆಂಬರ್‌ 22ರಂದು ತೀರ್ಪನ್ನು ಕಾಯ್ದಿರಿಸಿತ್ತು.

Share Post