CrimeNational

ಮೇಲ್ವರ್ಗದ ಬಡವರಿಗೆ ಮೀಸಲಾತಿ ಸಂವಿಧಾನಬದ್ಧ; ಸುಪ್ರೀಂ ಕೋರ್ಟ್‌ ಮಹತ್ವದ ತೀರ್ಪು

ನವದೆಹಲಿ; ಆರ್ಥಿಕವಾಗಿ ಹಿಂದುಳಿದ ಮೇಲ್ವರ್ಗಗಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಶೇಕಡಾ 10ರಷ್ಟು ಮೀಸಲಾತಿ ನೀಡಿ, 103ನೇ ಸಂವಿಧಾನ ತಿದ್ದುಪಡಿ ಸಂವಿಧಾನ ಬದ್ಧವಾಗಿದೆ ಎಂದು ಸುಪ್ರೀಂಕೋರ್ಟ್ ಹೇಳಿದೆ. ಕೇಂದ್ರ ಸರ್ಕಾರದ ಮಾಡಿದ ಸಂವಿಧಾನ ತಿದ್ದುಪಡಿ ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ತೀರ್ಪು ನೀಡಿದ ಮುಖ್ಯ ನ್ಯಾ. ಯು.ಯು ಲಲಿತ್ ನೇತೃತ್ವದ ಸಾಂವಿಧಾನಿಕ ಪೀಠ 3:2 ಆದೇಶ ನೀಡಿದೆ.

ಐವರು ನ್ಯಾಯಮೂರ್ತಿಗಳ ಪೈಕಿ ಮೂವರು ತಿದ್ದುಪಡಿಯ ಸಿಂಧುತ್ವವನ್ನು ಎತ್ತಿಹಿಡಿದು ಆದೇಶ ನೀಡಿದ್ದಾರೆ. ಉಳಿದ ಇಬ್ಬರು ನ್ಯಾಯಮೂರ್ತಿಗಳು ಭಿನ್ನಮತ ವ್ಯಕ್ತಪಡಿಸಿದ್ದಾರೆ. ನ್ಯಾಯಮೂರ್ತಿ ದೀನೇಶ್ ಮಹೇಶ್ವರಿ, ನ್ಯಾ. ಬೇಲಾ ತ್ರಿವೇದಿ, ನ್ಯಾ ಜೆ.ಬಿ ಪರ್ದಿವಾಲಾ ಆರ್ಥಿಕ ಹಿಂದುಳಿದ ವರ್ಗ ಪರವಾಗಿ ಆದೇಶ ನೀಡಿದರೇ, ಮುಖ್ಯ ನ್ಯಾಯಮೂರ್ತಿ ಯು.ಯು ಲಲಿತ್, ನ್ಯಾ ರವೀಂದ್ರ ಭಟ್ ವಿರುದ್ಧವಾಗಿ ಆದೇಶ ನೀಡಿದ್ದಾರೆ.

Share Post