CID ತನಿಖೆಗೆ ಸೂರಜ್ ರೇವಣ್ಣ ಕೇಸ್; ರೇವಣ್ಣ ಕುಟುಂಬಕ್ಕೆ ಮತ್ತಷ್ಟು ಸಂಕಷ್ಟ
ಬೆಂಗಳೂರು; ರೇವಣ್ಣ ಪುತ್ರ, ಪರಿಷತ್ ಸದಸ್ಯ ಡಾ ಸೂರಜ್ ರೇವಣ್ಣ ಬಂಧನವಾಗಿದ್ದಾರೆ. ಅವರ ವಿರುದ್ಧ ಸಲಿಂಗ ಕಾಮ, ಅಸಹಜ ಲೈಂಗಿಕ ದೌರ್ಜನ್ಯ ಎಸಗಿದ ಆರೋಪವಿದೆ.. ಈ ಪ್ರಕಾರಣವನ್ನು ಈಗ ಸಿಐಡಿಗೆ ವರ್ಗಾವಣೆ ಮಾಡಲಾಗಿದೆ.
ಹಾಸನದಲ್ಲಿ ಬಂಧನವಾಗಿರುವ ಸೂರಜ್ ರೇವಣ್ಣ ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾವಣೆ ಮಾಡಲಾಗಿದೆ.
ಕಾನೂನು ಸುವ್ಯವಸ್ಥೆಯ ಎಡಿಜಿಪಿ ಹಿತೇಂದ್ರ ಅವರು ಸೂರಜ್ ರೇವಣ್ಣ ವಿರುದ್ಧದ ಪ್ರಕರಣವನ್ನು ಸಿಐಡಿಗೆ ವಹಿಸಿದ್ದು, ಈ ಸಂಬಂಧ ಅವರು ಹಾಸನ ಎಸ್ಪಿ, ಸಿಐಡಿ ಡಿಜಿಪಿಗೆ ಪತ್ರ ಬರೆದಿದ್ದಾರೆ. ಖುದ್ದು ಸಿಐಡಿ ಕಚೇರಿಗೆ ತೆರಳಿ ಕೇಸ್ ಫೈಲ್ ನೀಡುವಂತೆ ಸೂಚನೆ ನೀಡಿದ್ದಾರೆ.
ಇನ್ನು ಸೂರಜ್ ರೇವಣ್ಣ ವಿರುದ್ಧ ಐಪಿಸಿ ಸೆಕ್ಷೆನ್ 377, 342, 506 ಅಡಿ ಕೇಸ್ ದಾಖಲಾಗಿದ್ದು, ವಿಚಾರಣೆ ಬೆಂಗಳೂರಿನ ಜನಪ್ರತಿನಿಧಿ ಕೋರ್ಟ್‌ಗೆ ವರ್ಗಾವಣೆ ಸಾಧ್ಯತೆ ಇದೆ.