ಅಪ್ರಾಪ್ತ ಹೆಣ್ಣು ಮಕ್ಕಳ ದುರ್ಬಳಕೆ ಅನುಮಾನ; ಪ್ರಜ್ವಲ್ ಕೇಸ್‌ನಲ್ಲಿ ಮಕ್ಕಳ ಹಕ್ಕು ಆಯೋಗ ಎಂಟ್ರಿ!
ಬೆಂಗಳೂರು; ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಅಶ್ಲೀಲ ವಿಡಿಯೋ ಪ್ರಕರಣದ ತನಿಖೆ ಜೋರಾಗಿ ನಡೆಯುತ್ತಿದೆ.. ಎಸ್‌ಐಟಿ ಅಧಿಕಾರಿಗಳು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ.. ಇದರ ಜೊತೆಗೆ ರೇವಣ್ಣ ಅವರ ಹೊಳೆ ನರಸೀಪುರ ಮನೆಯ ಮಹಜರು ಕೂಡಾ ನಡೆಸಲಾಗುತ್ತಿದೆ.. ಈ ಬೆನ್ನಲ್ಲೇ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಕೂಡಾ ಈ ಪ್ರಕರಣದಲ್ಲಿ ಎಂಟ್ರಿ ಕೊಟ್ಟಿದೆ..
ಸಂತ್ರಸ್ತ ಮಹಿಳೆಯೊಬ್ಬರು ತನ್ನ ಮಗಳ ಜೊತೆ ಕೂಡಾ ಅಸಭ್ಯವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಿದ್ದಾರೆ.. ಈ ಹಿನ್ನೆಲೆಯಲ್ಲಿ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಎಂಟ್ರಿ ಕೊಟ್ಟಿದೆ.. ಈ ಬಗ್ಗೆ ಎಸ್‌ಐಟಿಗೆ ಮಕ್ಕಳು ಹಕ್ಕುಗಳ ರಕ್ಷಣಾ ಆಯೋಗ ಪತ್ರ ಬರೆದಿದೆ..
ಮಹಿಳೆಯೊಬ್ಬರು ತನ್ನ ಮಗಳ ಜೊತೆ ಅಸಭ್ಯವಾಗಿ ವರ್ತಿಸಿರುವ ಬಗ್ಗೆ ಹೇಳಿಕೆ ನೀಡಿದ್ದಾಳೆ.. ಹೀಗಾಗಿ ಪ್ರಕರಣದಲ್ಲಿ ಅಪ್ರಾಪ್ತ ಹೆಣ್ಣುಮಕ್ಕಳನ್ನೂ ಬಳಸಿಕೊಂಡಿರುವ ಅನುಮಾನ ನಮಗಿದೆ… ಈ ಹಿನ್ನೆಲೆಯಲ್ಲಿ ಈ ಬಗ್ಗೆ ಮಾಹಿತಿ ಏನಾದರೂ ಸಿಕ್ಕರೆ ತಮಗೆ ವರದಿ ನೀಡುವಂತೆ ಎಸ್‌ಐಟಿಗೆ ಮಕ್ಕಳ ಹಕ್ಕುಗಳ ಆಯೋಗದ ಮುಖ್ಯಸ್ಥ ಬಿ.ಕೆ.ಸಿಂಗ್ ಪತ್ರ ಬರೆದಿದ್ದಾರೆ..