CrimeDistricts

ನೇಣು ಬಿಗಿದುಕೊಂಡು ಸ್ಥಿತಿಯಲ್ಲಿ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು!

ಚಿತ್ರದುರ್ಗ; ಎಂಟನೇ ತರಗತಿ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾಳೆ.. ಈ ಸಾವು ಹಲವು ಅನುಮಾನ ಮೂಡಿಸಿದೆ.. ಚಿತ್ರದುರ್ಗ ತಾಲೂಕಿನ ಹಳವುದರ ಲಂಬಾಣಿಹಟ್ಟಿಯಲ್ಲಿ ಈ ಘಟನೆ ನಡೆದಿದೆ.. 

ಬೇಬಿ ಬಾಯಿ ಮತ್ತು ಉಮೇಶ್ ನಾಯ್ಕ್ ದಂಪತಿಯ ಪುತ್ರಿ ಸಂಜನಾ (14) ಎಂಬಾಕೆಯೇ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ವಿದ್ಯಾರ್ಥಿನಿಯಾಗಿದ್ದಾಳೆ.. ಈಕೆ  ಕರಿಯಮ್ಮನ ಹಟ್ಟಿಯಲ್ಲಿರುವ ಸರ್ಕಾರಿ ಪ್ರೌಢಶಾಲೆಯಲ್ಲಿ ಎಂಟನೇ ತರಗತಿ ಓದುತ್ತಿದ್ದಳು. ಮನೆಯಲ್ಲಿ ಯಾರೂ ಇಲ್ಲದ ವೇಳೆ ಸೀರೆಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ..

ಈ ಬಗ್ಗೆ ಭರಮ ಸಾಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ..

 

Share Post