ಪೊಲೀಸರು ಅರೆಸ್ಟ್ ಮಾಡ್ತಾರೆಂಬ ಭಯ; ಆತ್ಮಹತ್ಯೆ ಮಾಡಿಕೊಂಡ ಯುವಕ..!
ಹೈದರಾಬಾದ್; ಅಗ್ನಿಪಥ್ ಯೋಜನೆ ವಿರೋಧಿಸಿ ಹೋರಾಟ ಮಾಡಿದ್ದಕ್ಕೆ ಪೊಲೀಸರು ಬಂಧಿಸುತ್ತಾರೆಂಬ ಭಯದಿಂದ ಯುವಕನೊಬ್ಬ ಆತ್ಮಹತ್ಯೆ ಶರಣಾಗಿದ್ದಾನೆ. ಯುವಕ ಗೋದಾವರಿ ನದಿಗೆ ಹಾರಿ ಪ್ರಾಣ ಬಿಟ್ಟಿದ್ದು, ಗೋದಾವರಿ ಘಾಟ್ ಬಳಿ ಯುವಕ ಶವ ಪತ್ತೆಯಾಗಿದೆ.
ಕೇಂದ್ರ ಸರ್ಕಾರ ಇತ್ತೀಚೆಗೆ ಅಗ್ನಿಪಥ್ ಯೋಜನೆ ಜಾರಿಗೆ ತಂದಿತ್ತು. ಇದನ್ನು ವಿರೋಧಿಸಿ ದೇಶಾದ್ಯಂತ ಹೋರಾಟ ನಡೆದಿತ್ತು. ಸಿಕಂದರಾಬಾದ್ ರೈಲ್ವೇ ನಿಲ್ದಾಣದಲ್ಲೂ ಸಾವಿರಾರು ಯುವಕರು ಪ್ರತಿಭಟನೆ ನಡೆಸಿದ್ದರು. ಈ ವೇಳೆ ರೊಚ್ಚಿಗೆದ್ದ ಕೆಲವರು ರೈಲುಗಳಿಗೆ ಬೆಂಕಿ ಹಚ್ಚಿದ್ದರು. ಈ ಪ್ರತಿಭಟನೆಯಲ್ಲಿ ಮೃತ ಯುವಕ ಕೂಡಾ ಭಾಗವಹಿಸಿದ್ದ. ರೈಲುಗಳಿಗೆ ಬೆಂಕಿ ಹಚ್ಚಿದ್ದರಿಂದಾಗಿ ಈತ ಕೂಡಾ ಬಂಧನದ ಭೀತಿ ಎದುರಿಸುತ್ತಿದ್ದ. ಅದೇ ಭೀತಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಶಂಕಿಸಲಾಗಿದೆ.
ಕೇಂದ್ರ ಸರ್ಕಾರದ ಅಗ್ನಿಪಥ್ ಯೋಜನೆ ವಿರುದ್ಧ ದೇಶಾದ್ಯಂತ ಜೂನ್‍ನಲ್ಲಿ ಪ್ರತಿಭಟನೆಗಳು ನಡೆದಿದ್ದವು. ಕೇಂದ್ರವು ಅಗ್ನಿಪಥ್ ಯೋಜನೆಯನ್ನು ಅನಾವರಣಗೊಳಿಸಿದ್ದು 17.5 ರಿಂದ 21 ವರ್ಷ ವಯಸ್ಸಿನ ಯುವಕರನ್ನು ನಾಲ್ಕು ವರ್ಷಗಳ ಅವಧಿಗೆ ಸೇನೆಯ ಮೂರು ಸೇವೆಗಳಲ್ಲಿ ಯಾವುದಕ್ಕಾದರೂ “ಅಗ್ನಿವೀರ್” ಆಗಿ ನೇಮಿಸಿಕೊಳ್ಳಲು ನಿರ್ಧರಿಸಿತ್ತು.