CrimeDistricts

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಭೀಕರ ಅಪಘಾತ; ಮರಕ್ಕೆ ನೇತಾಡುತ್ತಿದೆ ಮೃತದೇಹ!

ಚಿಕ್ಕಬಳ್ಳಾಪುರ; ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ಬಳಿ ಭೀಕರ ಕಾರು ಅಪಘಾತ ಸಂಭವಿಸಿದೆ.. ಚಾಲಕನ ನಿಯಂತ್ರಣ ತಪ್ಪಿ ಕಾರು ಕಾಲುವೆಗೆ ಉರುಳಿದ್ದು, ಮೂವರು ದಾರುಣವಾಗಿ ಸಾವನ್ನಪ್ಪಿದ್ದಾರೆ.. ಅದರಲ್ಲಿ ಒಂದು ಮೃತದೇಹ ಮರವೊಂದಕ್ಕೆ ಸಿಲುಕಿ ನೇತಾಡುತ್ತಿದ್ದ ದೃಶ್ಯ ಮನಕಲಕುವಂತಿತ್ತು..

ಗೌರಿಬಿದನೂರು ತಾಲ್ಲೂಕಿನ ವಾಟದಹೊಸಹಳ್ಳಿ ಗ್ರಾಮದ ಬಳಿ ಈ ದುರ್ಘಟನೆ ನಡೆದಿದೆ.. ಬೆಸ್ಕಾಂ ಸಿಬ್ಬಂದಿ ಪ್ರಯಾಣಿಸುತ್ತಿದ್ದ ಬ್ರಿಜಾ ಕಾರು ಕಾಲುವೆಗೆ ಉರುಳಿದ್ದರಿಂದ ಈ ದುರ್ಘಟನೆ ನಡೆದಿದೆ.. ಕೆಪಿಟಿಸಿಎಲ್ ಸಿಬ್ಬಂದಿ ವೇಣಗೋಪಾಲ್ (34), ಶ್ರೀಧರ್ (35) ಹಾಗೂ ಬೆಸ್ಕಾಂ ಲೈನ್​ಮ್ಯಾನ್ ಮಂಜಪ್ಪ (35) ಕಾರು ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ..

ಕಳೆದ ರಾತ್ರಿಯೇ ಈ ದುರ್ಘಟನೆ ನಡೆದಿದ್ದು, ಬೆಳಗ್ಗೆ ಬೆಳಕಿಗೆ ಬಂದಿದೆ.. ಅಪಘಾತದಲ್ಲಿ ಕಾರಿನಲ್ಲಿದ್ದ ಒಬ್ಬ ವ್ಯಕ್ತಿ ಮಾತ್ರ ಬದುಕುಳಿದಿದ್ದಾನೆ.. ಗೌರಿಬಿದನೂರು ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಿಸಲಾಗಿದೆ..

 

Share Post