CrimeDistricts

ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಮುದ್ದೆಯಂತಾಯ್ತು ಕಾರು!; ಇಬ್ಬರು ವಿದ್ಯಾರ್ಥಿಗಳ ದುರ್ಮರಣ!

ರಾಮನಗರ; ರಾಮನಗರ ಬಳಿ ಭೀಕರ ಅಪಘಾತ ನಡೆದಿದ್ದು, ಆಂಧ್ರಪ್ರದೇಶದ ಮೂಲದ ಇಬ್ಬರು ಎಂಜಿನಿಯರಿಂಗ್‌ ವಿದ್ಯಾರ್ಥಿಗಳು ದಾರುಣವಾಗಿ ಸಾವನ್ನಪ್ಪಿದ್ದಾರೆ.. ಕಾರಿನಲ್ಲಿ ಮೈಸೂರಿನಿಂದ ವಾಪಸ್‌ ಬರುವಾಗ ಲಾರಿ ಡಿಕ್ಕಿ ಹೊಡೆದಿದ್ದು, ಈ ದುರ್ಘಟನೆ ನಡೆದಿದೆ..

ಬಿಡದಿ ಹೊರವಲಯದ ಕಪನಯ್ಯನದೊಡ್ಡಿ ಬಳಿಯ ಎಕ್ಸ್​ಪ್ರೆಸ್ ವೇನಲ್ಲಿ ಕಾರು ಹಾಗೂ ಲಾರಿ ನಡುವೆ ಡಿಕ್ಕಿ ಸಂಭವಿಸಿದೆ.. ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಕಾರು ಮುದ್ದೆಯಂತಾಗಿದೆ.. ಕಾರಿನಲ್ಲಿದ್ದ ಆಂಧ್ರಪ್ರದೇಶ ಮೂಲದ ವಿಶ್ವ (21) ಮತ್ತು ಸೂರ್ಯ (21) ಎಂಬ ಇಬ್ಬರು ವಿದ್ಯಾರ್ಥಿಗಳು ದಾರುಣವಾಗಿ ಸಾವನ್ನಪ್ಪಿದ್ದಾರೆ..

ಬೆಂಗಳೂರಿನ ವಿದ್ಯಾರಣ್ಯಪುರದ ಎಂಜಿನಿಯರಿಂಗ್ ಕಾಲೇಜೊಂದರಲ್ಲಿ ಇವರಿಬ್ಬರೂ ವಿದ್ಯಾಭ್ಯಾಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಘಟನೆಯಲ್ಲಿ ಕಾರು ಚಾಲಕನಿಗೆ ಗಂಭೀರ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ..

ಸ್ಥಳಕ್ಕೆ ರಾಮನಗರ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share Post