ಪಶ್ಚಿಮ ಬಂಗಾಲದಲ್ಲಿ ರೈಲು ದುರಂತ; ಮೃತರ ಕುಟುಂಬಗಳಿಗೆ 5 ಲಕ್ಷ ಪರಿಹಾರ
ಕೋಲ್ಕತ್ತಾ: ಬಿಕಾನೇರ್ -ಗುವಾಹಟಿ ರೈಲು ಹಳಿ ತಪ್ಪಿ ಏಳು ಪ್ರಯಾಣಿಕರು ದಾರುಣ ಸಾವಿಗೀಡಾಗಿದ್ದು, ಘಟನಾ ಸ್ಥಳಕ್ಕೆ ರೈಲ್ವೆ ಸಚಿವ ಆಶ್ವಿನಿ ವೈಷ್ಣವ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇದೇ ವೇಳೆ ಮೃತರ ಕುಟುಂಬಗಳಿಗೆ ಹಾಗೂ ಗಾಯಾಳುಗಳಿಗೆ ಅವರು ಪರಿಹಾರ ಘೋಷಣೆ ಮಾಡಿದ್ದಾರೆ.
ಕೇಂದ್ರ ಸರ್ಕಾರದಿಂದ ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ, ತೀವ್ರವಾಗಿ ಗಾಯಗೊಂಡಿರುವವರಿಗೆ 1 ಲಕ್ಷ ರೂಪಾಯಿ ಹಾಗೂ ಸಣ್ಣಪುಟ್ಟ ಗಾಯಗಳಾಗಿರುವವರಿಗೆ 25 ಸಾವಿರ ರೂಪಾಯಿ ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ.
ಬಿಕಾನೇರ್-ಗುವಾಹಟಿ ರೈಲು ಅಪಘಾತಕ್ಕೆ ಲೋಕೋಮೋಟಿವ್ ಉಪಕರಣಗಳಲ್ಲಿ ದೋಷ ಕಂಡುಬಂದಿದ್ದೇ ಕಾರಣ ಎಂದು ರೈಲ್ವೆ ಸಚಿವರು ಇದೇ ಸಂದರ್ಭದಲ್ಲಿ ತಿಳಿಸಿದ್ದಾರೆ.