CrimeDistricts

ನಾಪತ್ತೆಯಾಗಿದ್ದ ಧರ್ಮಸ್ಥಳ ಸಂಘದ ಸೇವಾ ಪ್ರತಿನಿಧಿ ಪೂಜಾ ಶವವಾಗಿ ಪತ್ತೆ!

ಶಿವಮೊಗ್ಗ; ಆಗುಂಬೆಯಿಂದ ನಾಪತ್ತೆಯಾಗಿದ್ದ ಧರ್ಮಸ್ಥಳ ಸಂಘದ ಸೇವಾ ಪ್ರತಿನಿಧಿ ಪೂಜಾ ಶವವಾಗಿ ಪತ್ತೆಯಾಗಿದ್ದಾಳೆ.. ತೀರ್ಥಹಳ್ಳಿ ತಾಲೂಕಿನ ಹಸಿಮನೆ ಗ್ರಾಮದ ಪೂಜಾ ಮೃತದೇಹ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ನಾಲೂರು ಸಮೀಪದ ಅರಣ್ಯ ಪ್ರದೇಶದಲ್ಲಿ ಸಿಕ್ಕಿದೆ..

ಪೂಜಾಳನ್ನು ಭೀಕರವಾಗಿ ಕೊಲೆ ಮಾಡಿ ಅರಣ್ಯ ಪ್ರದೇಶದಲ್ಲಿ ಬಿಸಾಡಲಾಗಿದೆ.. ಜೂನ್ 29 ರಂದು ಪೂಜಾ ಆಗುಂಬೆಯಿಂದ ನಾಪತ್ತೆಯಾಗಿದ್ದಳು.. ಪ್ರಕರಣ ಸಂಬಂಧ ಪೊಲೀಸರು ಮಣಿಕಂಠ ಎಂಬುವವನನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸಿದ್ದಾರೆ.. ಕೊಲೆಗೆ ಕಾರಣ ಇನ್ನೂ ತಿಳಿದುಬಂದಿಲ್ಲ..

 

Share Post