BengaluruCrime

ಎಸ್‌ಟಿ ನಿಗಮದಲ್ಲಿನ ಕೋಟ್ಯಂತರ ರೂಪಾಯಿ ಹಗರಣ; ನಿಗಮದ ಎಂಡಿ, ಲೆಕ್ಕಾಧಿಕಾರಿ ಅರೆಸ್ಟ್‌

ಬೆಂಗಳೂರು; ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದ ಅವ್ಯವಹಾರ ಆರೋಪದ ಹಿನ್ನೆಲೆಯಲ್ಲಿ ಇಬ್ಬರು ಅಧಿಕಾರಿಗಳನ್ನು ಬಂಧಿಸಲಾಗಿದೆ.. ನಿಗಮದ ಎಂಡಿ ಪದ್ಮನಾಭ್ ಹಾಗೂ ಲೆಕ್ಕಾಧಿಕಾರಿ ಪರಶುರಾಮ್ ಬಂಧನಕ್ಕೊಳಗಾದವರು.. ಹೊಸದಾಗಿ ರಚನೆಯಾದ ಎಸ್‌ಐಟಿ ತಂಡದ ಅಧಿಕಾರಿಗಳು ಈ ಇಬ್ಬರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ… ಇದೀಗ ಇಬ್ಬರನ್ನೂ ಕೋರ್ಟ್‌ಗೆ ಮುಂದೆ ಹಾಜರುಪಡಿಸಿ ಕಸ್ಟಡಿಗೆ ಪಡೆಯಲಿದ್ದಾರೆ..

ಇನ್ನು ಪ್ರಕರಣ ಸಂಬಂಧ ತನಿಖೆ ನಡೆಸಲು ಎಸ್‌ಐಟಿ ರಚನೆ ಮಾಡಲಾಗಿದೆ.. ಸಿಐಡಿ ಆರ್ಥಿಕ ಅಪರಾಧಗಳ ವಿಭಾಗದ ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕ ಮನೀಶ್‌ ಖರ್ಬೀಕರ್‌ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚನೆ ಮಾಡಲಾಗಿದ್ದು, ಇದರಲ್ಲಿ ಬೆಂಗಳೂರು ನಗರ ಉಪ ಪೊಲೀಸ್‌ ಆಯುಕ್ತ ಶಿವಪ್ರಕಾಶ್‌ ದೇವರಾಜು, ರಾಜ್ಯ ಗುಪ್ತ ವಾರ್ತೆ ಪೊಲೀಸ್‌ ಅಧೀಕ್ಷಕ ಹರಿರಾಮ್‌ ಶಂಕರ್‌, ಸಿಐಡಿ ಪೊಲೀಸ್‌ ಅಧೀಕ್ಷಕ ರಾಘವೇಂದ್ರ ಕೆ. ಹೆಗಡೆ ಅವರು ಕೂಡಾ ಇದ್ದಾರೆ..

 

Share Post