ಮದುವೆಯಾಗ್ತೀನಿ ಎಂದು ಕೈಕೊಟ್ಟ ಯೂಟ್ಯೂಬರ್!; ಅತ್ಯಾಚಾರ ಕೇಸ್ ದಾಖಲು!
ಕೊಪ್ಪಳ; ಯೂಟ್ಯೂಬರ್ ಒಬ್ಬ ಯುವತಿಯೊಬ್ಬಳಿಗೆ ಮದುವೆಯಾಗುತ್ತೇನೆ ಎಂದು ನಂಬಿಸಿ ದೈಹಿಕವಾಗಿ ಬಳಸಿಕೊಂಡು ಕೈಕೊಟ್ಟಿದ್ದಾನೆ ಎಂಬ ಆರೋಪ ಕೇಳಿಬಂದಿದೆ.. ಈ ಹಿನ್ನೆಲೆಯಲ್ಲಿ ಆತನ ವಿರುದ್ಧ ಸಂತ್ರಸ್ತ ಯುವತಿ ದೂರು ನೀಡಿದ್ದು, ಪೊಲೀಸರು ಅತ್ಯಾಚಾರ ಕೇಸ್ ದಾಖಲು ಮಾಡಿಕೊಂಡಿದ್ದಾರೆ.. ಕೊಪ್ಪಳದ ಕಾರಟಗಿ ಪೊಲೀಸ್ ಠಾಣೆಯಲ್ಲಿ ಯೂಟ್ಯೂಬರ್ ರವಿರಾಜ್ ಎಂಬಾತನ ವಿರುದ್ಧ ಕೇಸ್ ದಾಖಲಾಗಿದೆ..
ಯೂಟ್ಯೂಬರ್ ರವಿರಾಜ್ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವ ಶಾರ್ಟ್ ಮೂವಿಗಳನ್ನು ಮಾಡಿ ಯೂಟ್ಯೂಬ್‌ನಲ್ಲಿ ಅಪ್‌ಲೋಡ್ ಮಾಡುತ್ತಿದ್ದ.. ಇದೇ ವೇಳೆ ಯುವತಿಯೊಬ್ಬಳ ಆತನಿಗೆ ಪರಿಚಯವಾಗಿದ್ದು, ಇಬ್ಬರ ನಡುವೆ ಲವ್ ಆಗಿದೆ.. ಮದುವೆಯಾಗುತ್ತೇನೆ ಎಂದು ನಂಬಿಸಿದ್ದ ರವಿರಾಜ್, ದೈಹಿಕವಾಗಿ ಬಳಸಿಕೊಂಡು ಕೈಕೊಟ್ಟಿದ್ದಾನೆ ಎಂದು ಯುವತಿ ಆರೋಪ ಮಾಡಿದ್ದಾಳೆ..
ಈ ಹಿನ್ನೆಲೆಯಲ್ಲಿ ಯುವತಿ ತನ್ನ ಪೋಷಕರ ಜೊತೆ ಬಂದು ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ.. ನಮ್ಮಿಬ್ಬರ ಖಾಸಗಿತನದಲ್ಲಿದ್ದಾಗಿನ ವಿಡಿಯೋಗಳನ್ನು ಇಟ್ಟುಕೊಂಡು ಆತ ಬ್ಲಾಕ್‌ಮೇಲ್ ಮಾಡುತ್ತಿದ್ದಾನೆ ಅಂತ ಯುವತಿ ಆರೋಪ ಮಾಡಿದ್ದಾಳೆ.. ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ..
ಈ ನಡುವೆ ಅಜ್ಞಾತ ಸ್ಥಳದಿಂದ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿರುವ ರವಿರಾಜ್, ಯುವತಿಯೇ ನನಗೆ ಬ್ಲಾಕ್ ಮೇಲ್ ಮಾಡಿದ್ದಾಳೆ.. ಇದರಲ್ಲಿ ನನ್ನದೇನೂ ತಪ್ಪಿಲ್ಲ ಎಂದು ಆರೋಪ ಮಾಡಿದ್ದಾನೆ..