CrimeDistricts

ಎರಡು ಬೈಕ್‌ಗಳ ಮುಖಾಮುಖಿ ಡಿಕ್ಕಿ; ಮೂವರ ದಾರುಣ ಸಾವು

ಕಲಬುರಗಿ; ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಮೂವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಕಲಬುರಗಿ ಜಿಲ್ಲೆ ಚಿಂಚೋಳಿ ತಾಲ್ಲೂಕಿನ ಹೂವಿನಹಳ್ಳಿ ಗ್ರಾಮದ ಬಳಿ ನಡೆದಿದೆ. ಘಟನೆಯಲ್ಲಿ ಒಬ್ಬ ವ್ಯಕ್ತಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

ಜಗನ್ನಾಥ್‌, ಮೆಹಬೂಬ್‌, ಶ್ರೀಕಾಂತ್‌ ಮೃತಪಟ್ಟ ದುರ್ದೈವಿಗಳಾಗಿದ್ದಾರೆ. ಎರಡೂ ಬೈಕ್‌ಗಳಲ್ಲಿ ತಲಾ ಇಬ್ಬರು ಪ್ರಯಾಣ ಮಾಡುತ್ತಿದ್ದರು. ಘಟನೆಯಲ್ಲಿ ಅಮರ್‌ ಎಂಬಾತ ಮಾತ್ರ ಬದುಕುಳಿದಿದ್ದಾನೆ. ಆತನಿಗೂ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಎರಡೂ ಬೈಕ್‌ ಸವಾರರು ಅತ್ಯಂತ ವೇಗವಾಗಿ ಬೈಕ್‌ ಚಲಾಯಿಸುತ್ತಿದ್ದರು ಎನ್ನಲಾಗಿದೆ. ಈ ಬಗ್ಗೆ ಸುಲೇಪೇಟ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share Post