CrimeNational

ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಭದ್ರತಾ ಪಡೆ

ಜಮ್ಮುಕಾಶ್ಮೀರ: ಬುಧವಾರ ರಾತ್ರಿ ನಡೆದ ಶೋಧ ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರನ್ನು ಭದ್ರತಾ ಪಡೆ ಹೊಡೆದುರುಳಿಸಿರುವ ಘಟನೆ ಜಮ್ಮು-ಕಾಶ್ಮೀರದ ಕುಲ್ಗಾಂ ಜಿಲ್ಲೆಯಲ್ಲಿ ನಡೆದಿದೆ. ಭದ್ರತಾ ಪಡೆಗಳು ರೆಡ್ವಾನಿ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆಯಲ್ಲಿ ತೊಡಗಿದ್ದ ವೇಳೆ ಉಗ್ರರ ಗುಂಪೊಂದು ಗುಂಡು ಹಾರಿಸಿದ್ದಾರೆ. ಈ ವೇಳೆ ಸೇನೆ ಹಾಗೂ ಉಗ್ರರ ನಡುವೆ ಗುಂಡಿನ ಕಾಳಗ ನಡೆದಿದೆ. ಇಂದು ಮುಂಜಾನೆವರೆಗೂ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆಂದು ಸೇನೆಯ ಮೂಲಗಳಿಂದ ತಿಳಿದುಬಂದಿದೆ. ಇನ್ನು ಸಾವನ್ನಪ್ಪಿದ ಉಗ್ರರು ಯಾವ ಸಂಘಟನೆಗೆ ಸೇರಿಸದವರೆಂಬ ಮಾಹಿತಿ ಇಲ್ಲ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿರುವುದಾಗಿ ಕಾಶ್ಮೀರ ಪೊಲೀಸ್‌ ವಕ್ತಾರರು ತಿಳಿಸಿದ್ದಾರೆ.

Share Post