CrimeDistricts

ಚಿಕ್ಕಬಳ್ಳಾಪುರದಿಂದ ಇಬ್ಬರು ಯುವತಿಯರು ನಾಪತ್ತೆ!; ಹಲವು ಅನುಮಾನ

ಚಿಕ್ಕಬಳ್ಳಾಪುರ; ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಇತ್ತೀಚೆಗೆ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿವೆ.. ಇದರ ಜೊತೆಗೆ ಯುವತಿಯರ ನಾಪತ್ತೆ ಪ್ರಕರಣಗಳು ಕೂಡಾ ಹೆಚ್ಚಾಗಿ ದಾಖಲಾಗುತ್ತಿವೆ.. ಕಳೆದ ಒಂದು ವಾರದಲ್ಲೇ ಚಿಕ್ಕಬಳ್ಳಾಪು ತಾಲ್ಲೂಕು ವ್ಯಾಪ್ತಿಯಲ್ಲೇ ಇಬ್ಬರು ಯುವತಿಯರು ನಾಪತ್ತೆಯಾಗಿದ್ದಾರೆ.. ನಂದಿಗಿರಿಧಾಮ ಪೊಲೀಸ್‌ ಠಾಣೆ ಹಾಗೂ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣಗಳು ದಾಖಲಾಗಿವೆ..

ಚಿಕ್ಕಬಳ್ಳಾಪುರ ತಾಲ್ಲೂಕಿನ ನಂದಿ ಗ್ರಾಮದಿಂದ 22 ವರ್ಷದ ಯುವತಿ ನಾಪತ್ತೆಯಾಗಿದ್ದಾಳೆ.. ಇನ್ನೊಂದೆಡೆ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್‌ ಠಾಣಾ ವ್ಯಾಪ್ತಿಯ ಕಲ್ಲುಕುಂಟೆ ಗ್ರಾಮದಿಂದ 20 ವರ್ಷದ ಯುವತಿ ನಾಪತ್ತೆಯಾಗಿದ್ದಾಳೆ.. ಈ ಬಗ್ಗೆ ಯುವತಿಯರು ಪೋಷಕರು ಪೊಲೀಸ್‌ ಠಾಣೆಯಲ್ಲಿ  ಮಿಸ್ಸಿಂಗ್‌ ಕಂಪ್ಲೇಂಟ್‌ ದಾಖಲು ಮಾಡಿದ್ದಾರೆ.. ಆದ್ರೆ ಅವರು ಎಲ್ಲಿ ಹೋಗಿದ್ದಾರೆ ಅನ್ನೋದು ಇನ್ನೂ ಪತ್ತೆಯಾಗಿಲ್ಲ.. ಹೀಗಾಗಿ ಹಲವು ಅನುಮಾನಗಳಿಗೆ ಕಾರಣವಾಗಿದೆ..

ಇನ್ನು ಜಿಲ್ಲೆಯಲ್ಲಿ ಇಂತಹ ಪ್ರಕರಣಗಳು ಹೆಚ್ಚಾಗುತ್ತಿದ್ದು, ಹೆಣ್ಣು ಮಕ್ಕಳ ಪೋಷಕರಲ್ಲಿ ಆತಂಕಕ್ಕೆ ಕಾರಣವಾಗಿದೆ..

 

Share Post